ರಾಜಕೀಯ ಮಾಡಿ ವಾರಂಟ್ ತಪ್ಪಿಸಿಕೊಂಡಿದ್ದೇ ಯಡವಟ್ಟಾಯಿತು

ಜತೆಗೆ 2006ರ ಸೆಪ್ಟೆಂಬರಿನಲ್ಲೇ ಜನಾರ್ದನ ರೆಡ್ಡಿ ಹಾಗೂ ಓಎಂಸಿ ಎಂಡಿ ಶ್ರೀನಿವಾಸ ರೆಡ್ಡಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ದೇವಸ್ಥಾನ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದರು.
ಎಲ್ಲಾ ಮಾಹಿತಿಯನ್ನು ಸಿಬಿಐ ಅಧಿಕಾರಿಗಳು ಸ್ಥಳೀಯ ಪೊಲೀಸರು ಹಾಗೂ ಸಂಡೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸಂಗ್ರಹಿಸಿ, ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 2006ರಲ್ಲೇ ಆರೋಪಿಗಳನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಆದರೆ ರಾಜಕೀಯ ಪ್ರಭಾವ ಬಳಸಿ ಸ್ಥಳೀಯ ಪೊಲೀಸರ ಹಿಡಿತದಿಂದ ತಪ್ಪಿಸಿಕೊಂಡಿದ್ದರು.
ಜತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಡೂರು ನ್ಯಾಯಾಲಯ 9 ಬಾರಿ ವಾರೆಂಟ್ ಜಾರಿ ಮಾಡಿದರೂ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಈಗ ಮತ್ತೆ ಆರೋಪಿಗಳಿಗೆ ಜಾಮೀನು ಸಿಕ್ಕರೆ ಸಾಕ್ಷಿಗಳನ್ನು ನಾಶಪಡಿಸುವುದರ ಜತೆಗೆ ಇಡೀ ಪ್ರಕರಣವನ್ನು ತಿರುಗುಮುರುಗು ಮಾಡುವಷ್ಟು ಚಾಣಾಕ್ಷರಾಗಿದ್ದಾರೆ.
ಆರೋಪಿಗಳು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂಬುದಕ್ಕೆ ಸುಗ್ಗಲಮ್ಮ ದೇವಸ್ಥಾನ ನೆಲಸಮ ಪ್ರಕರಣವೇ ನಿದರ್ಶನ ಎಂದು ಸಿಬಿಐ ಆಕ್ಷೇಪಣಾ ಪತ್ರದಲ್ಲಿ ಸ್ಪಷ್ಟಪಡಿಸಿದೆ.












Click it and Unblock the Notifications