ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೊಮ್ಮಾಯಿ ಬಾಯಿಂದ ಭದ್ರಾ ಭಗವದ್ಗೀತೆ ವಾಚನ

By Mahesh
|
Google Oneindia Kannada News

Minister Basavaraj Bommai
ಬೆಂಗಳೂರು, ಸೆ.13: ಭದ್ರಾ ಮೇಲ್ದಂಡೆ ಯೋಜನೆಗೆ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಯಡಿಯೂರಪ್ಪ ವಿರುದ್ಧ ವಿಚಾರಣೆ ನಡೆದಿದೆ. ಆದರೆ, ರಾಜ್ಯ ಸರಕಾರ ಯಾವುದೇ ಬಗೆಯ ಅವ್ಯವಹಾರ ನಡೆಸಿಲ್ಲ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.

ಯೋಜನೆ ಚರಿತ್ರೆ: ಈ ಯೋಜನೆಯು ಎಸ್.ನಿಜಲಿಂಗಪ್ಪರ ಅಧಿಕಾರಾವಧಿಯಲ್ಲಿ ಆರಂಭವಾಗಿದ್ದರೂ 2003ರಲ್ಲಿ ಎಸ್.ಎಂ.ಕೃಷ್ಣ ನೇತೃತ್ವದ ಸರಕಾರದಲ್ಲಿ 2,813 ಕೋಟಿ ರೂ.ಗೆ ಆಡಳಿತಾತ್ಮಕ ಒಪ್ಪಿಗೆ ಲಭಿಸಿತು. 2005ರಲ್ಲಿ ಕೆ.ಸಿ.ರೆಡ್ಡಿ ನೇತೃತ್ವದ ಸಮಿತಿಯು ಯೋಜನೆಗೆ 4,150 ಕೋಟಿ ರೂ.ಅಂದಾಜು ವೆಚ್ಚ ತಗಲುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು ಎಂದು ಬೊಮ್ಮಾಯಿ ತಿಳಿಸಿದರು.

ಅನಂತರ ಹಲವಾರು ತಾಂತ್ರಿಕ ಅನುಮೋದನೆ, ಮತ್ತಿತರ ಕಾರ್ಯಗಳು ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದ್ದು, ರಾಷ್ಟ್ರಪತಿ ಆಡಳಿತ ವೇಳೆ ಯೋಜನೆಯ ಟೆಂಡರ್‌ನ ಅಂತಿಮ ಹಂತದ ಶಿಫಾರಸುಗಳ ವರದಿ ಸಲ್ಲಿಕೆಯಾಗಿತ್ತು.

ಅದರ ಮುಂದುವರಿದ ಭಾಗವಾಗಿ ಬಿ.ಎಸ್.ಯಡಿಯೂರಪ್ಪನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಯೋಜನೆಯ ಪ್ರಥಮ ಹಾಗೂ ದ್ವಿತೀಯ ಹಂತದ ಒಟ್ಟು 5,985 ಕೋಟಿ ರೂ. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಅಂಗೀಕಾರ ನೀಡಲಾಯಿತು. ಇದರಿಂದ ಯಾವುದೇ ಅಕ್ರಮ ನಡೆದಿಲ್ಲ. ನಿಯಮಾನುಸಾರವಾಗಿ ಕಾಮಗಾರಿ ಗುತ್ತಿಗೆ ನೀಡಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ಪ್ರಸ್ತುತ ಭದ್ರಾ ಮೇಲ್ದಂಡೆ ಯೋಜನೆಯ ಪ್ರಥಮ ಹಂತದ ಕಾಮಗಾರಿಯು 3,985 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 2013ರಲ್ಲಿ ಪೂರ್ಣಗೊಳ್ಳಲಿದೆ.

ಈ ಯೋಜನೆ ಪೂರ್ಣಗೊಂಡ ಬಳಿಕ ಚಿತ್ರದುರ್ಗ ಜಿಲ್ಲೆಯ ಸುಮಾರು ಒಂದು ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಲಿದೆ. 50 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯ ಎರಡನೆ ಹಂತದ ಕಾಮಗಾರಿಯು 2 ಸಾವಿರ ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿದ್ದು, 2013-14ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವ
ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

English summary
Minister Basavaraj Bommai has defended that government has not violated any norms while awarding tenders for the Upper Bhadra Project without getting Cabinet clearance. Lokayukta is conducting enquiry on Yeddyurappa getting kick backs in UBP phase 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X