ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾನು ಹೈಕಮಾಂಡ್‌ನ ಕಂಟ್ರೋಲ್‌ನಲ್ಲಿಲ್ಲ: ಡಿವಿಎಸ್

By * ಬಿಎಂ ಲವಕುಮಾರ್, ಮೈಸೂರು
|
Google Oneindia Kannada News

DV Sadananda Gowda
ಮೈಸೂರು, ಸೆ. 15 : "ನನ್ನ ಅಧಿಕಾರ ನನ್ನತ್ರನೇ ಇದೆ, ಹೈಕಮಾಂಡ್‌ನ ಹತ್ರ ಅಲ್ಲ" ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ರಾಜ್ಯ ಸರ್ಕಾರವನ್ನು ಬಿಜೆಪಿ ಹೈಕಮಾಂಡ್ ನಿಯಂತ್ರಿಸುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಗುರುವಾರ ಮೈಸೂರಿನಲ್ಲಿ ನಡೆದ ದಸರಾ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಸಂದರ್ಭ ಸುದ್ದಿಗಾರರು ಅವರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆಯನ್ನು ಗಮನಕ್ಕೆ ತಂದಾಗ ಈ ಮೇಲಿನಂತೆ ಪ್ರತಿಕ್ರಿಯಿಸಿದರು. ಆ ರೀತಿಯ ಯಾವುದೇ ನಿಯಂತ್ರಣದಲ್ಲಿ ಸರ್ಕಾರ ನಡೆಯುತ್ತಿಲ್ಲ ಅದಕ್ಕೆ ಅವಕಾಶ ನಾನು ನೀಡುವುದಿಲ್ಲ ಎಂದು ಹೇಳಿದರು.

ಶಾಸಕ ಶ್ರೀರಾಮುಲು ರಾಜೀನಾಮೆಯನ್ನು ಅಂಗೀಕರಿಸದಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಸ್ಪೀಕರ್ ಬೋಪಯ್ಯ ಹಾಗೂ ಶಾಸಕ ಶ್ರೀರಾಮುಲು ಅವರಿಗೆ ಸಂಬಂಧಿಸಿದ ವಿಷಯವಾಗಿದ್ದು ಇದರಲ್ಲಿ ನಾನು ತಲೆಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಯೋಗೇಶ್ವರ್ ಅವರ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸದಾನಂದಗೌಡ ಅವರು, ಆರೋಪ ಮಾಡಿದ ಕೂಡಲೇ ಅಪರಾಧಿಯಾಗುವುದಿಲ್ಲ. ಆದ್ದರಿಂದ ಸಚಿವ ಸಂಪುಟದಿಂದ ಅವರನ್ನು ಕೈಬಿಡುವ ಹಾಗೂ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ದಸರಾ ಪ್ರಗತಿ ಪರಿಶೀಲನಾ ಸಭೆ ಮುಗಿಸಿದ ಬಳಿಕ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರ್ಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಭಾಗವಹಿಸಿದ ಅವರು ನೂತನವಾಗಿ ನಿರ್ಮಿಸಲಾಗಿರುವ ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

English summary
I am not in control of BJP high command. I am still in command of control of state administration, asserts DV Sadananda Gowda. This was in response to the comment made by BS Yeddyurappa. He was in Mysore to supervise the preparation for Mysore Dasara activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X