ಸೃಷ್ಟಿ ವೆಂಚರ್ಸ್ ಪುಸ್ತಕ ಪರಿಷೆ ಬಗ್ಗೆ ನಿಮಗೆ ಎಷ್ಟು ಗೊತ್ತು?

ಆದರೆ, ಸಂತೆಯಲ್ಲಿ ಪುಸ್ತಕಗಳ ಖರೀದಿ ಅಥವಾ ಮಾರಾಟ ಇರುವುದಿಲ್ಲ. ಬದಲಾಗಿ ಹೊಸ ಮತ್ತು ಹಳೆಯ ಎಲ್ಲ ಪ್ರಕಾರದ ಪುಸ್ತಕಗಳು ಹಸ್ತದಿಂದ ಹಸ್ತಕ್ಕೆ ಹಾಗೂ ಪುಸ್ತಕದಿಂದ ಪುಸ್ತಕಕ್ಕೆ ವಿನಿಮಯವಾಗಲಿವೆ. ಅಲ್ಲಿ ಯಾರು ಬೇಕಾದರೂ ತಮಗೆ ಇಷ್ಟವಾದ ಪುಸ್ತಕವನ್ನು ಉಚಿತವಾಗಿ ಕೊಂಡೊಯ್ಯಬಹುದು. ಅದೇ ರೀತಿ, ಇತರರ ಅನುಕೂಲಕ್ಕಾಗಿ ಪುಸ್ತಕವನ್ನು ಕೊಡಬಹುದಾಗಿದೆ ಎಂದು ಸೃಷ್ಟಿ ವೆಂಚರ್ಸ್ ಸಂಚಾಲಕ ನಾಗರಾಜ್ ಆರ್. ನಾವುಂದ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಕಡಿಮೆಯಾಗುತ್ತಿರುವ ಪುಸ್ತಕ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರವೇಶ ಉಚಿತ. ಆದರೆ, ಒಬ್ಬರಿಗೆ ಒಂದು ಪುಸ್ತಕ ಮಾತ್ರ ನೀಡಲಾಗುವುದು ಎಂದು ನಾಗರಾಜ್ ತಿಳಿಸಿದರು. ನಾಗರಾಜ್ ನಾವುಂದ ಅವರ ಮೊಬೈಲ್ - 99450 03479 ಮತ್ತು 93434 99518.
ಇದು ಸಂಸ್ಥೆಯ ನಾಲ್ಕನೇ ಪುಸ್ತಕ ಪರಿಷೆಯಾಗಿದೆ. ಕಳೆದ ಮೂರು ಪುಸ್ತಕ ಪರಿಷೆಗಳಲ್ಲಿ ಸುಮಾರು 80 ಸಾವಿರ ಪುಸ್ತಕಗಳನ್ನು ವಿತರಿಸಿದ್ದೇವೆ. ಈ ಬಾರಿ 1 ಲಕ್ಷ ಪುಸ್ತಕಗಳನ್ನು ಓದುಗರಿಗೆ ತಲುಪಿಸುವ ಗುರಿ ಇದೆ. ಈ ನಿಟ್ಟಿನಲ್ಲಿ ಪುಸ್ತಕ ಸಂಗ್ರಹ ಕಾರ್ಯ ನಡೆದಿದ್ದು, ಈಗಾಗಲೇ ಸುಮಾರು 35 ಸಾವಿರ ವಿವಿಧ ಪ್ರಕಾರದ ಪುಸ್ತಕಗಳನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಓದುಗರು ಮತ್ತು ಪುಸ್ತಕಗಳ ನಡುವಿನ ಸೇತುವೆಯಾಗಿ ಪುಸ್ತಕ ಪರಿಷೆ ಕಾರ್ಯನಿರ್ವಹಿಸಲಿದೆ. ಪುಸ್ತಕಗಳ ಸಂಗ್ರಹಕ್ಕೆ ಸ್ಥಳೀಯ ಸಂಘಟನೆಗಳು, ಪುಸ್ತಕ ಪ್ರಾಧಿಕಾರ ಸೇರಿದಂತೆ ಜನರೂ ಕೈಜೋಡಿಸಿದ್ದಾರೆ ಎಂದು ಅವರು ಸ್ಮರಿಸಿದರು. ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ನಾಗಶ್ರೀ, ಪದ್ಮಶ್ರೀ, ಸತೀಶ್ ಉರಾಳ ಮತ್ತಿತರರು ಉಪಸ್ಥಿತರಿದ್ದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications