ಕೆಎಚ್ ರಂಗನಾಥ್ ಅಸ್ವಸ್ಥ, ಮಣಿಪಾಲ್ ಗೆ ದಾಖಲು

KH Ranganath
ಬೆಂಗಳೂರು, ಸೆ. 17 : ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಶಾಸಕ, ದಲಿತ ಮುಖಂಡ ಕೆಎಚ್ ರಂಗನಾಥ್ (84) ಅವರು ತೀವ್ರ ಅಸ್ವಸ್ಥವಾಗಿರುವ ಕಾರಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಹದಿನೈದು ದಿನಗಳಿಂದ ಅವರು ಬಳ್ಳಾರಿ ರಸ್ತೆಯಲ್ಲಿರುವ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಯಾಲಿಸಿಸ್ ಗೆ ಒಳಗಾಗಿದ್ದ ಅವರನ್ನು ಈಗ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಅನುಯಾಯಿಯಾಗಿದ್ದ ರಂಗನಾಥ್ ಅವರು ಅರಸ್ ರಿಂದ ಹಿಡಿದು ಎಸ್ಎಮ್ ಕೃಷ್ಣ ಅವರ ಮಂತ್ರಿಮಂಡಲದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. 1972-74ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು.

ಕೇಂದ್ರ ವಿದೇಶಾಂಗ ಸಚಿವ ಎಸ್ಎಮ್ ಕೃಷ್ಣ ಅವರು ಸೇರಿದಂತೆ ಅನೇಕ ಗಣ್ಯರು ರಂಗನಾಥ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಅವರು ಶೀಘ್ರವಾಗಿ ಗುಣಮುಖರಾಗಲೆಂದು ಅವರ ಬೆಂಬಲಿಗರು ಪ್ರಾರ್ಥಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+