ಕ್ಯಾನ್ಸರ್ ಪೀಡಿತ ಕಟ್ಟಾಗೆ ಸಿಗಲಿಲ್ಲ ಬೇಲು, ಮತ್ತೆ ಜೈಲು

No bail to Katta Subramanya Naidu
ಬೆಂಗಳೂರು, ಸೆ.19: ಕೈದಿ ನಂಬರ್ 7801 ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಜಾಮೀನು ಅರ್ಜಿ ಮತ್ತೆ ತಿರಸ್ಕರಿಸಲಾಗಿದೆ.

ಕೆಐಎಡಿಬಿ ಭೂ ಹಗರಣದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಬಂಧನ ಅವಧಿ ಸೆ.19ಕ್ಕೆ ಮುಕ್ತಾಯವಾಗಿದೆ. ಆರೋಪಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರಿಗೆ ಜಾಮೀನು ನೀಡಬೇಕು ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಪರ ವಕೀಲರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಆದರೆ, ವಿಚಾರಣೆಯನ್ನು ಸೆ.24ಕ್ಕೆ ಮುಂದೂಡಿದ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು ಸೆ.24ರಂದು ಮೂವರು ಆರೋಪಿಗಳು ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಕೆಐಎಡಿಬಿ ಭೂ ಹಗರಣದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅವರ ಪುತ್ರ ಕಟ್ಟಾ ಜಗದೀಶ್ ಮತ್ತು ಇಟಾಸ್ಕ ನಿರ್ದೇಶಕ ಶ್ರೀನಿವಾಸ್ ಅವರುಗಳು ಹೈಕೋರ್ಟ್ ನಲ್ಲಿ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.

ಆರೋಪಿಗಳು ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ. ಅವರ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ. ಸೆ.24ರಂದು ಕೋರ್ಟ್ ಗೆ ಹಾಜರಾಗಿ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು.

ಈ ನಡುವೆ ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಟಾಸ್ಕಾ ಕಂಪನಿ ಸಿಬ್ಬಂಧಿ ಇಬ್ಬರನ್ನು ಘೋಷಿತ ಅಪರಾಧಿಗಳು ಎಂದು ಪರಿಗಣಿಸಲಾಗಿದೆ ಎಂದು ನ್ಯಾಯಮೂರ್ತಿ ಸುಧೀಂದ್ರ ರಾವ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+