ಪರಿಸರ ನಾಶಕ್ಕೆ ಗಣಿ ಕಾರಣ: ಸಿಎಂಗೆ ತಡವಾಗಿ ಜ್ಞಾನೋದಯ

ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಸ್ಥಾಪನಾ ದಿನಾಚರಣೆ ಹಾಗೂ 2011ನೆ ಸಾಲಿನ 'ಪರಿಸರ ಉತ್ಕೃಷ್ಟತಾ ಪ್ರಶಸ್ತಿ" ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಬುಧವಾರ ಅವರು ಹೀಗೆ ಹೇಳಿದ್ದಾರೆ.
ರಾಜ್ಯದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು 'ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮ ಪ್ರಮುಖ ಕಾರಣ" ಎಂದು ಸುಪ್ರೀಂಕೋರ್ಟ್‌ನ ಆದೇಶದಲ್ಲಿ ಹೇಳಲಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಸುಪ್ರೀಂಕೋರ್ಟ್ ಆದೇಶದನ್ವಯ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ಇಷ್ಟೇ ಅಲ್ಲದೆ, ಪರಿಸರ ಮಾಲಿನ್ಯ ನಿಯಂತ್ರಣ ಕಾಲದ ಅಗತ್ಯವಾಗಿದೆ. ಈ ಸಂಬಂಧದ ಯೋಜನೆಗಳು ಯಶಸ್ಸು ಕಾಣಬೇಕಾದರೆ ಪ್ರತಿಯೊಬ್ಬ ನಾಗರಿಕನು ತನ್ನ ಪ್ರಾಮಾಣಿಕ ಪಾತ್ರ ವಹಿಸಬೇಕು ಎಂದೂ ಬೋಧಿಸಿದರು.












Click it and Unblock the Notifications