ಯಡ್ಡಿ ರಥಯಾತ್ರೆ, ಸಾಚಾತನಕ್ಕೆ ಪುಸ್ತಕ ರಿಲೀಸ್

Yeddyurappa to release a book
ಹಾವೇರಿ, ಸೆ. 26: ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತರ ತನಿಖಾ ವರದಿಯ ಲೋಪದೋಷಗಳನ್ನು ಬಯಲಿಗೆಳೆಯಲು ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆ. ಈ ಕುರಿತು ಪುಸ್ತಕ ಬರೆದಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರವೇ ಪುಸ್ತಕ ಜನತೆಯ ಕೈ ಸೇರಲಿದೆ ಎಂದಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಮಾತನಾಡಿದ ಯಡಿಯೂರಪ್ಪ, 'ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ನಿರಪರಾಧಿ, ನ್ಯಾಯಾಲಯದಲ್ಲಿ ತನಗೆ ಯಾವುದೇ ಶಿಕ್ಷೆ ಆಗದು. ನನ್ನನ ಮೇಲಿನ ಆರೋಪಗಳಿಗೆ ಸಂಬಂಧಿಸಿದ ಯಾವುದೇ ದಾಖಲೆಗಳಿಲ್ಲ' ಎಂದರು

ಅಧಿಕಾರಕ್ಕಾಗಿ ರಥಯಾತ್ರೆ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಭ್ರಷ್ಟಾಚಾರ ವಿರೋಧಿಸಿ ರಥಯಾತ್ರೆ ಕೈಗೊಂಡಿದ್ದರೆ, ಯಡಿಯೂರಪ್ಪ ಅವರು ಮತ್ತೆ ಅಧಿಕಾರಕ್ಕೆ ಬರಲು ರಥಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ. ಅ.8ರಂದು ಆರಂಭವಾಗುವ ಈ ಯಾತ್ರೆಯಲ್ಲಿ ಶಾಸಕರು, ಸಚಿವರು ಹಾಗೂ ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಳ್ಳಲಿದ್ದರಂತೆ.

ಯೋಗಿಗೆ ಬೆಂಬಲ: ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಮೆಗಾಸಿಟಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಬಿಜೆಪಿ ವಿರುದ್ಧ ಕಾರ್ಯ ನಿರ್ವಹಿಸುತ್ತಿದ್ದಾರೆ. ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂದರು.

ಕೊಪ್ಪಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಗೆಲುವು ಖಚಿತ. ವಿಪಕ್ಷಗಳಿಗೆ ಮತ್ತೊಮ್ಮೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಯಡಿಯೂರಪ್ಪ ವಿಶ್ವಾಸದಿಂದ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+