ಸೆ.28ರಂದು ತಲಕಾವೇರಿಗೆ ಸಾಂಪ್ರದಾಯಿಕ ಪೂಜೆ

ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮಗಳು ಸೆ.28ರಿಂದ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 8.45ಕ್ಕೆ ಪಾತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 5ರಂದು ಅಜ್ಞಾ ಮುಹೂರ್ತ, ಅಕ್ಟೋಬರ್ 13ರಂದು ಮಧ್ಯಾಹ್ನ 12.10ಕ್ಕೆ ಅಕ್ಷಯ ಪಾತ್ರೆ ಕಾರ್ಯಕ್ರಮಗಳು ನಡೆಯಲಿವೆ.
ಈ ಬಾರಿ ರಾತ್ರಿ ಸಮಯದಲ್ಲಿ ತೀರ್ಥೋದ್ಭವವಾಗುವುದರಿಂದ ಹೆಚ್ಚಿನ ಭದ್ರತೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಅಲ್ಲದೆ ಕಾವೇರಿ ತೀರ್ಥೋದ್ಭವದ ಸಂದರ್ಭ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿರುವುದರಿಂದ ವಿವಿಧ ಕಡೆಗಳಿಂದ ಸುಮಾರು 30 ಹೆಚ್ಚುವರಿ ಬಸ್‌ಗಳನ್ನು ಒದಗಿಸಲು ಸೂಚಿಸಲಾಗಿದೆ.
ನಾಡಿನೆಲ್ಲೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬರುವ ಪ್ರವಾಸಿಗರಿಗೆ ಶೌಚಾಲಯ, ವಿದ್ಯುತ್, ಆಂಬ್ಯುಲೆನ್ಸ್ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಕಲ್ಪಿಸುವ ಸಲುವಾಗಿ ಸಂಬಂಧಿಸಿದ ಇಲಾಖೆಗಳಿಗೆ ಜಿಲ್ಲಾಡಳಿತ ಸೂಚಿಸಿದೆ.











Click it and Unblock the Notifications