ಆಳ್ವಾಸ್ ನುಡಿಸಿರಿ' ಅಧ್ಯಕ್ಷರಾಗಿ ಎಂ.ಎಂ.ಕಲಬುರ್ಗಿ
ಮಂಗಳೂರು,
ಸೆ.27 : ಜೈನಕಾಶಿ ಮೂಡುಬಿದ್ರೆಯಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ನ. 11ರಿಂದ 13ರ ತನಕ ನಡೆಯಲಿರುವ ಆಳ್ವಾಸ್ ನುಡಿಸಿರಿ'ಯ ಅಧ್ಯಕ್ಷರಾಗಿ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ, ನುಡಿಸಿರಿ ರೂವಾರಿ, ಡಾ.ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. id="toptextpromo">ಬಿಜಾಪುರ
ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಗ್ರಾಮದವರಾದ ಎಂ.ಎಂ. ಕಲಬುರ್ಗಿ ಅವರು ಹಂಪಿ ವಿಶ್ವವಿದ್ಯಾನಿಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳೂ ಅವರು ಆಗಿದ್ದರು. id='are-slot-1' class='oiad oi-axt oiadv'> id='top-searched-articles'>ಕನ್ನಡ
ಮನಸ್ಸು ಸಂಘರ್ಷ ಮತ್ತು ಸಾಮರಸ್ಯ-ಪರಿಕಲ್ಪನೆಯಲ್ಲಿ ಈ ಬಾರಿಯ ನುಡಿಸಿರಿ ಸಮ್ಮೇಳನ ನಡೆಯಲಿದೆ. ಕಳೆದ ಏಳು ವರ್ಷಗಳಲ್ಲಿ ಸರಕಾರದ ಯಾವುದೇ ನೆರವು ಪಡೆಯದೆ ಮಾದರಿ ಸಮ್ಮೇಳನ ನಡೆಸಿದ ಪ್ರಶಂಸೆ ನಾಡಿನ ಜನರಿಂದ ವ್ಯಕ್ತವಾಗಿದೆ. ಈ ಬಾರಿಯೂ ಸಮ್ಮೇಳನವನ್ನು ವ್ಯವಸ್ಥಿತ ರೀತಿಯಲ್ಲಿ ಸಂಯೋಜನೆಗೊಳಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ ಎಂದು ಡಾ.ಆಳ್ವ ತಿಳಿಸಿದರು.











Click it and Unblock the Notifications