ಮಾಜಿ ಸಚಿವ ಶ್ರೀರಾಮುಲು ರಾಜೀನಾಮೆ ವಾಪಸ್

ಶ್ರೀರಾಮುಲು ಮನವೊಲಿಸುವಲ್ಲಿ ಬಿಜೆಪಿ ಹಿರಿಯ ನಾಯಕರು ಯಶಸ್ವಿಯಾಗಿದ್ದು, ರಾಮುಲು ಅವರು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂದಕ್ಕೆ ಪಡೆಯಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿದೆ.
ಆದರೆ, ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಶ್ರೀರಾಮುಲು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಬಳ್ಳಾರಿ ನಡೆಸಿದ ಸುದ್ದಿಗೋಷ್ಥಿಯಲ್ಲೂ ರಾಜೀನಾಮೆ ಹಿಂದಕ್ಕೆ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಸೆ.29ರಂದು ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ರಾಮುಲು ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಹಾಗಾಗಿ ವಾರಾಂತ್ಯದ ಹೊತ್ತಿಗೆ ರಾಮುಲು ರಾಜೀನಾಮೆ ವಾಪಸ್ ಸುದ್ದಿ ಖಚಿತವಾಗಲಿದೆ.












Click it and Unblock the Notifications