ಯಡ್ಡಿ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ

Yeddyurappa
ಬೆಂಗಳೂರು, ಸೆ.29: ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಯಡಿಯೂರಪ್ಪ ವಿರುದ್ಧ 2 ಹಾಗೂ 3ನೇ ದೂರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ(ಸೆ.30) ನೀಡಿರುವ ತಡೆಯಾಜ್ಞೆ ಪ್ರಶ್ನಿಸಿಸಲು ಸಿರಾಜಿನ್ ಬಾಷಾ ನಿರ್ಧರಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು, ಎರಡು ಮೂರು ದಿನಗಳಲ್ಲಿ ಪ್ರಕರಣ ವಿಚಾರಣೆ ಬರುವ ಸಾಧ್ಯತೆಯಿದೆ ಎಂದು ಸಿರಾಜಿನ್ ಪರ ವಕೀಲ ಹೇಮಂತ ರಾಜು ಹೇಳಿದ್ದಾರೆ.

ಅರಕೆರೆ, ಉತ್ತರಹಳ್ಳಿ ಡಿನೋಫಿಕೇಷನ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಕೀಲ ವಿನೋದ್ ಕುಮಾರ್ ಅವರು ಸಲ್ಲಿಸಿದ 2ನೇ ದೂರಿನ ಆಧಾರದ ಮೇಲೆ ಲೋಕಾಯುಕ್ತ ವಿಶೇಷ ನ್ಯಾಯಲಯ ಆ.8 ರಂದು ಸಮನ್ಸ್ ಜಾರಿ ಮಾಡಿತ್ತು.

ಸೆ.22ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆದ ಡಿನೋಟೀಫಿಕೇಷನ್ ಪ್ರಕರಣ ವಿಚಾರಣೆಗೆ ಯಡಿಯೂರಪ್ಪ ಅವರು ಗೈರು ಹಾಜರಾಗಿದ್ದರು. ಉಳಿದ 14 ಮಂದಿ ಸಹ ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದರು.

ಇದಲ್ಲದೆ, ತನ್ನ ವಿರುದ್ಧ ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಮೂರನೆ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ಮಧ್ಯಂತರ ತೀರ್ಪು ಸೆ.30ರಂದು ಪ್ರಕಟಗೊಳ್ಳಬೇಕಿತ್ತು. ಆದರೆ, ಪ್ರಕರಣದ ತೀರ್ಪು ಆ.4 ರಂದು ಪ್ರಕಟಗೊಳ್ಳುವ ಸಾಧ್ಯತೆಯಿದೆ.

ರಡ್ಡಿಗೆ ಮತ್ತೆ ಜೈಲು: ನಾಂಪಲ್ಲಿ ವಿಶೇಷ ನ್ಯಾಯಾಲಯದಲ್ಲಿ ರೆಡ್ಡಿ ಜಾಮೀನು ಅರ್ಜಿ ಮತ್ತೆ ತಿರಸ್ಕಾರಗೊಂಡಿದೆ. ಅಲ್ಲದೆ, ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲು ನಿರಾಕರಿಸಿದ ನ್ಯಾಯಾಧೀಶರು, ರೆಡ್ಡಿದ್ವಯರನ್ನು ಮತ್ತೆ ಚಂಚಲಗುಡ ಜೈಲಿಗೆ ಕಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+