ಗಣಿ ಅಕ್ರಮ: ಬಂಧನ ಭೀತಿಯಲ್ಲಿ 787 ಅಧಿಕಾರಿಗಳು

ಈಗ ಭ್ರಷ್ಟ ಅಧಿಕಾರಿಗಳ ವಿರುದ್ಧ ದಿಟ್ಟವಾಗಿ ಕ್ರಮ ಜರುಗಿಸುವ ಸುವರ್ಣ ಅವಕಾಶ ಡಿವಿ ಸದಾನಂದ ಗೌಡರ ಸಂಪುಟಕ್ಕೆ ಸಿಕ್ಕಿದೆ.
ಜುಲೈ ಕೊನೆ ವಾರದಲ್ಲಿ ಲೋಕಾಯುಕ್ತ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಅಂತಿಮ ವರದಿಯಲ್ಲಿ 787 ಅಧಿಕಾರಿ ಸಿಬ್ಬಂದಿಗಳು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.
ಡಿವಿ ಸದಾನಂದಗೌಡ ಅವರು ರಾಜ್ಯದ ಮುಖ್ಯಮಂತ್ರಿ ಆದ ತಕ್ಷಣ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜೈರಾಜ್ ಅವರ ನೇತೃತ್ವದಲ್ಲಿ ಸಮಿತಿ ನೇಮಕ ಮಾಡಿ ಕೂಲಂಕುಶ ಅಧ್ಯಯನ ಮಾಡಿ ವರದಿ ನೀಡುವಂತೆ ಸೂಚಿಸಿದ್ದರು.
ಅಧಿಕಾರಗಳಿಗೆ ಜೈಲು ಭೀತಿ: ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತಂತೆ ಮಾಹಿತಿ ನೀಡಿದ್ದು, ಇದನ್ನು ಸಚಿವ ಸಂಪುಟ ಅನುಮೋದನೆ ಮಾಡಬೇಕಾಗಿದೆ. ಆಮೇಲೆ ಕಾನೂನು ಕ್ರಮ ಜರುಗಿಸಬಹುದಾಗಿದೆ.
ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಂದ ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಿರುವ ಅಂಶವನ್ನು ಸಮಿತಿ ಕಲೆ ಹಾಕಿ ಸರ್ಕಾರಕ್ಕೆ ವರದಿ ನೀಡಿದೆ.
ಈಗಾಗಲೇ 29ಕ್ಕೂ ಹೆಚ್ಚು ಅರಣ್ಯ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಭ್ರಷ್ಟ ಐಎಎಸ್ ಗಳ ಕತೆ ಏನು?: ಅಕ್ರಮಗಣಿಗಾರಿಕೆಯಲ್ಲಿ ಐಎಎಸ್, ಐಪಿಎಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸರ್ವೇ ಇಲಾಖೆ ಹಾಗೂ ಐಎಫ್‌ಎಸ್ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ನೇರವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ ಬಳಿಕ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ.ನಂತರ ಕೇಂದ್ರ ಸರ್ಕಾರಕ್ಕೆ ಕ್ರಮದ ಬಗ್ಗೆ ಶಿಫಾರಸ್ಸು ಮಾಡಬೇಕಾಗುತ್ತದೆ.












Click it and Unblock the Notifications