ಬೆಂಕಿಯಲ್ಲಿ ಬೆಂದ ಪೀಣ್ಯ ಪ್ಯಾರಗನ್ ಫ್ಯಾಕ್ಟರಿ

Major Fire in Bangalore
ಬೆಂಗಳೂರು, ಸೆ.30: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಪ್ಯಾರಗನ್ ಪಾಲಿಮರ್ಸ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ.

ಸುಮಾರು 40 ಅಗ್ನಿಶಾಮಕದಳಗಳು ಘಟನಾ ಸ್ಥಳಕ್ಕೆ ಆಗಮಿಸಿದೆ. ಸಿಬ್ಬಂದಿಗಳು ಕಳೆದ ಎರಡೂವರೆ ಗಂಟೆಯಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಯಲಿದೆ.

ಅಕ್ಕಪಕ್ಕದ ಕಾರ್ಖಾನೆಗಳಿಗೆ ಬೆಂಕಿ ಹರಡದಂತೆ ಮೊದಲಿಗೆ ಎಚ್ಚರಿಕೆ ವಹಿಸಲಾಗುತ್ತಿದೆ. ಅಗತ್ಯ ಬಿದ್ದರೆ ಮಾಗಡಿಯಿಂದ ಹೆಚ್ಚಿನ ಅಗ್ನಿಶಾಮಕದಳವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಅಗ್ನಿಶಾಮಕದಳದ ಅಧಿಕಾರಿ ಈರಪ್ಪ ಹೇಳಿದ್ದಾರೆ.

ಅದೃಷ್ಟವಶಾತ್, ಘಟನೆ ಸಂಭವಿಸಿದ ಸಮಯದಲ್ಲಿ ಕಾರ್ಖಾನೆ ಒಳಗೆ ಯಾವುದೇ ನೌಕರರು ಇರಲಿಲ್ಲ. ಆದರೆ, ಬೆಂಕಿಯ ಕೆನ್ನಾಲಿಗೆಗೆ ಸಿಕ್ಕ ಫ್ಯಾಕ್ಟರಿ ಸಂಪೂರ್ಣವಾಗಿ ನಾಶವಾಗಿದೆ.

ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಇನ್ನೂ ನಂದಿಲ್ಲ. ಎನ್ ಟಿಟಿಎಫ್ ಕೇಂದ್ರ ಸಮೀಪ ಇರುವ ಫ್ಯಾಕ್ಟರಿಯಲ್ಲಿ ಬೆಂಕಿ ಬಿದ್ದ ಮೇಲೆ ಆ ಭಾಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+