ಮೌಂಟ್ ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪೂಜಾ ಸಾವು
ಬೆಂಗಳೂರು,
ಅ.1: ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ಮೌಂಟ್ ಕಾರ್ಮೆಲ್ ಕಾಲೇಜು ವಿದ್ಯಾರ್ಥಿನಿ ಮರಳು ಲಾರಿಯನ್ನು ಹಿಂದಿಕ್ಕಲು ಹೋಗಿ ಲಾರಿಗೆ ಸಿಕ್ಕಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಈ ಹೃದಯವಿದ್ರಾವಕ ಘಟನೆ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ (ಅ.1) ಬೆಳಗ್ಗೆ ನಡೆದಿದೆ. id="toptextpromo">ಯಲಹಂಕ
ಉಪನಗರದ ಪೂಜಾ ಸಲಗಾಂವ್ಕರ್ (20) ಮೃತಪಟ್ಟ ದುರ್ದೈವಿ. ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಪೂಜಾ ಮೂರನೇ ವರ್ಷದ ಎಂಸಿಎ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ 8.20ರ ಸಮಯದಲ್ಲಿ ಕಾಲೇಜಿಗೆ ಹೋಗುವ ಧಾವಂತದಲ್ಲಿ ಯಲಹಂಕ ಪೊಲೀಸ್ ಠಾಣೆ ಬಳಿ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕಲು ಹೋದರು. id='are-slot-1' class='oiad oi-axt oiadv'> id='top-searched-articles'>ಈ
ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ಪೂಜಾ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ತಾಯಿಯಿಲ್ಲದ ತಬ್ಬಲಿಯಾಗಿರುವ ಪೂಜಾ ತಂದೆಯೊಂದಿಗೆ ವಾಸವಾಗಿದ್ದರು. ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿ ಚಾಲಕ ಶ್ರೀರಂಗಯ್ಯ ಅವರನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.











Click it and Unblock the Notifications