ಕಾರ್ಪೊರೇಟರ್ ನಟರಾಜ್ ಹತ್ಯೆಗೆ ರಾಜಕೀಯ ದ್ವೇಷವೇ ಕಾರಣ
ಬೆಂಗಳೂರು,
ಅ.1: ಬಿಬಿಎಂಪಿ ಕಾರ್ಪೊರೇಟರ್ ನಟರಾಜ್ ಅವರನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. id="toptextpromo">ನಮ್ಮ
ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೆವು. ಇದನ್ನು ಸಹಿಸದೆ ಕೆಲವರು ಈ ಕೃತ್ಯವೆಸಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹತ್ಯೆಯ ಬಳಿಕ ಆಸ್ಪತ್ರೆಗೆ ಧಾವಿಸಿ ಬಂದ ಶಾಸಕರು ನಟರಾಜ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. id='are-slot-1' class='oiad oi-axt oiadv'> id='top-searched-articles'>ನಗರದಲ್ಲಿ
ಪ್ರತಿಪಕ್ಷದ ಸದಸ್ಯರ ಹತ್ಯೆ, ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಪೊಲೀಸ್ ವೈಫಲ್ಯವೂ ಕಾರಣವಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲೇ ಈ ರೀತಿಯ ಕೊಲೆಗಳು ನಡೆಯುತ್ತಿವೆ. ಸರ್ಕಾರ ಕೂಡಲೆ ಕ್ರಮ ಜರುಗಿಸಬೇಕು. ಪಾಲಿಕೆ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳಿಗೆ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.











Click it and Unblock the Notifications