ಅತಿ ಶೀಘ್ರದಲ್ಲೇ ಸಾರ್ವತ್ರಿಕ ಚುನಾವಣೆ: ಆಡ್ವಾಣಿ ಸುಳಿವು
ಹೊಸದಿಲ್ಲಿ,
ಅ.2: ಅತಿ ಶೀಘ್ರದಲ್ಲೇ ಸಾರ್ವತ್ರಿಕ ಚುನಾವಣೆ ನಡೆಯುವ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಸುಳಿವು ನೀಡಿದ್ದಾರೆ. ಯುಪಿಎ ಸರಕಾರ ಆತ್ಮಹತ್ಯಾ ಹಾದಿಯತ್ತ ಸಾಗಿರುವುದರಿಂದ ಅದರ ಭವಿಷ್ಯದ ಕುರಿತು ಏನನ್ನೂ ಹೇಳಲಾಗದು. ಹಾಗಾಗಿ ಲೋಕಸಭಾ ಚುನಾವಣೆಗೆ ತಯಾರಾಗುವಂತೆ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. id="toptextpromo">ಇಲ್ಲಿ
ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಭಾಷಣ ಮಾಡಿದ ಅವರು, ಯುಪಿಎ ಸರಕಾರ ಆತ್ಮಹತ್ಯಾ ಹಾದಿಯತ್ತ ಸಾಗುತ್ತಿದೆ. ಸ್ವಾತಂತ್ರಾ ನಂತರ ಇಂತಹ ಪರಿಸ್ಥಿತಿ ನಿರ್ಮಾಣವಾಗಿರಲಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸರಕಾರ, ಆಡಳಿತ ನಡೆಸಲು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಯಾವಾಗ ಏನು ಬೇಕಾದರೂ ಸಂಭವಿಸುವ ಸಾಧ್ಯತೆಯಿರುವುದರಿಂದ ಚುನಾವಣೆಗೆ ಸಿದ್ಧರಾಗುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. id='are-slot-1' class='oiad oi-axt oiadv'> id='top-searched-articles'>ಸರಕಾರ
ನಿಷ್ಕ್ರಿಯವಾಗಿರುವುದರಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ಇದರಿಂದ ಯುಪಿಎ ಸರಕಾರದ ಭ್ರಷ್ಟಾಚಾರ ಮತ್ತು ಬೆಲೆಯೇರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷ ಮಾಡಬೇಕು ಎಂದರು. ಎರಡು ದಿನಗಳ ಕಾಲ ನಡೆದ ಸಭೆಯಲ್ಲಿ ದೇಶದ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಯಿತು ಮತ್ತು ಪ್ರಸಕ್ತ ರಾಜಕೀಯ ಸ್ಥಿತಿ ಬಗ್ಗೆ ನಿರ್ಣಯವೊಂದನ್ನು ತೆಗೆದುಕೊಳ್ಳಲಾಯಿತು.











Click it and Unblock the Notifications