ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭದ್ರಾ ಮೇಲ್ದಂಡೆಯಲ್ಲೂ ಯಡಿಯೂರಪ್ಪಗೆ ಇಲ್ಲ ನೆಮ್ಮದಿ

By Srinath
|
Google Oneindia Kannada News

bhadra-upper-bsy-report-before-oct-26-lokayukta-court
ಬೆಂಗಳೂರು, ಅ.5: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಿಸಿರುವ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ ಅಕ್ಟೋಬರ್ 26ರೊಳಗೆ ವರದಿ ಸಲ್ಲಿಸುವಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ವೈ.ಎಸ್.ವಿ.ದತ್ತ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ಆರಂಭಿಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ, ದೂರಿನಲ್ಲಿರುವ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಅ. 26ರೊಳಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದರು.

ಮಂಗಳವಾರ ವಿಚಾರಣೆಯ ವೇಳೆ ತನಿಖೆಯ ಪ್ರಗತಿ ಕುರಿತು ನ್ಯಾಯಾಲಯಕ್ಕೆ ವಿವರ ನೀಡಿದ ಲೋಕಾಯುಕ್ತ ಡಿವೈಎಸ್‌ಪಿ ಎಸ್.ಗಿರೀಶ್, ತನಿಖೆ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಸದ್ಯ ದಾಖಲೆಗಳನ್ನು ಕಲೆಹಾಕಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿನ ತಾಂತ್ರಿಕ ಅಂಶಗಳ ಬಗ್ಗೆ ತಜ್ಞರಿಂದ ಅಭಿಪ್ರಾಯ ಪಡೆಯಬೇಕಿದೆ. ಹಲವು ಅಧಿಕಾರಿಗಳ ಹೇಳಿಕೆ ದಾಖಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲಾವಕಾಶ ನೀಡಬೇಕೆಂದು ಕೋರಿದರು.

ಆದರೆ ಪೊಲೀಸರ ಕೋರಿಕೆಯನ್ನು ಪೂರ್ಣವಾಗಿ ಮಾನ್ಯಮಾಡದ ನ್ಯಾಯಾಧೀಶರು, ಅ. 26ರವರೆಗೆ ಕಾಲಾವಕಾಶ ನೀಡಿದರು. ಅರ್ಜಿದಾರರಾದ ವೈ.ಎಸ್.ವಿ.ದತ್ತ ವಿಚಾರಣೆ ವೇಳೆ ಹಾಜರಿದ್ದರು

English summary
On Tuesday (Oct 4), the Karnataka Lokayukta Special Court has asked the Lokayukta Police to submit the report pertaining to corruption charges against the former Karnataka chief minister B. S. Yeddyurappa before Oct 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X