ಮಾಜಿ ಸಿಎಂ ಯಡಿಯೂರಪ್ಪ ಬಂಧನ ಬಹುತೇಕ ಖಚಿತ
ಬೆಂಗಳೂರು,
ಅ.5: ಅತ್ತ ಕೊಪ್ಪಳದ ಜನತಾ ನ್ಯಾಯಾಲಯದಲ್ಲಿ ಜಯಭೇರಿಯಾಗಿ ಇತ್ತ ಹೈಕೋರ್ಟ್‌ನಿಂದ ತಾತ್ಕಾಲಿಕ ರಕ್ಷಣೆ ಪಡೆದು ಬೀಗುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಬಂಧನದ ಭೀತಿ ಹೆಚ್ಚಾಗಿ ಕಾಡತೊಡಗಿದೆ. id="toptextpromo">ಡಿನೋಟಿಫಿಕೇಷನ್
ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಕೀಲ ಸಿರಾಜಿನ್ ಬಾಷಾ ದಾಖಲಿಸಿದ್ದ ಎರಡನೆ ಹಾಗೂ ಮೂರನೆ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಎಲ್ಲ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ಮಂಗಳವಾರ ರದ್ದು ಗೊಳಿಸಿದೆ. id='are-slot-1' class='oiad oi-axt oiadv'> id='top-searched-articles'>ಏಕ
ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿರಾಜಿನ್ ಬಾಷಾ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಎನ್.ಕುಮಾರ್ ಮತ್ತು ನ್ಯಾ. ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಸದರಿ ದೂರುಗಳಿಗೆ ಅ. 14ವರೆಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿತು. ಜತೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹಸಿರು ನಿಶಾನೆ ತೋರಿಸಿದೆ.











Click it and Unblock the Notifications