ದಸರಾಕ್ಕೆ ಹೋಗಿಲ್ವ? ಇಲ್ಲಿದೆ ಸಂಪೂರ್ಣ ಮೈಸೂರು ದಸರಾ
ಮೈಸೂರು,
ಅಕ್ಟೋಬರ್ 6: ಐತಿಹಾಸಿಕ 401ನೇ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಲಕ್ಷಾಂತರ ಮಂದಿ ಗುರುವಾರ ಸಾಕ್ಷಿಯಾದರು. ಈ ಒಂದು ಅಪರೂಪದ ಕ್ಷಣಗಳಿಗಾಗಿ ವರ್ಷದಿಂದ ಕಾಯುತ್ತಿದ್ದ ಮಂದಿ ಚಿನ್ನದ ಅಂಬಾರಿಯಲ್ಲಿ ವೀರಾಜಮಾನವಾದ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಸಿಕೊಂಡು ಕೃತಾರ್ಥರಾದರು. id="toptextpromo">ಬೆಳಗ್ಗಿನಿಂದಲೇ
ಮೈಸೂರಿನತ್ತ ಆಗಮಿಸಿದ ಲಕ್ಷಾಂತರ ಮಂದಿ ಅರಮನೆ ಹಾಗೂ ಜಂಬೂಸವಾರಿ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಜಮಾಯಿಸಿದ್ದರು. id='are-slot-1' class='oiad oi-axt oiadv'> id='top-searched-articles'>ಪಾಸ್
ಪಡೆದವರು ಕಾಯ್ದಿರಿಸಿದ ಸ್ಥಳಗಳಲ್ಲಿ ಆಸೀನರಾದರೆ, ಉಳಿದವರ ಪೈಕಿ ಕೆಲವರು ರಸ್ತೆ ಬದಿಯಲ್ಲಿ ಸೂಕ್ತವಾದ ಜಾಗವನ್ನು ಆರಿಸಿಕೊಂಡು ಆಸೀನರಾದರೆ, ಮತ್ತೆ ಕೆಲವರು ಕಟ್ಟಡ ಹಾಗೂ ಮರಗಳ ಮೇಲೆ ಹತ್ತಿ ಕುಳಿತು ಜಂಬೂಸವಾರಿಯನ್ನು ಹತ್ತಿರದಿಂದ ವೀಕ್ಷಿಸಿದರು. ಮುಂದಿನ ಪುಟದಲ್ಲಿದೆ ವಜ್ರ ಮುಷ್ಠಿ ಕಾಳಗ, ಬನ್ನಿಪೂಜೆ ಇತ್ಯಾದಿ...











Click it and Unblock the Notifications