ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುತ್ ಭಿಕ್ಷಾಟನೆಗೆ ದೆಹಲಿಯತ್ತ ಮುಖ್ಯಮಂತ್ರಿ ಡಿವಿಎಸ್

By Srinath
|
Google Oneindia Kannada News

power-shortage-cm-sadananda-gowda-to-visit-delhi
ಬೆಂಗಳೂರು.ಅ.8: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ಗಡ್ಕರಿ ವಿರಚಿತ 'ವಿಕಾಸ್ ಕಿ ಪಥ್' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಗಮನಾರ್ಹವೆಂದರೆ, ದೆಹಲಿ ಭೇಟಿ ವೇಳೆ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯ ಎದುರಿಸುತ್ತಿರುವ ತೀವ್ರ ವಿದ್ಯುತ್ ಕ್ಷಾಮದ ಬಗ್ಗೆ ವಿವರಿಸುವ ಅಂದಾಜಿದೆ.

'ರಾಜ್ಯವು ತೀವ್ರ ವಿದ್ಯುತ್ ಕ್ಷಾಮ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗ್ರಿಡ್‌ನಿಂದ ಹಂಚಿಕೆಯಾಗದ ಕೋಟಾದಡಿ ಪ್ರತಿದಿನ 500 ಮೆಗಾವ್ಯಾಟ್ ವಿದ್ಯುತ್ ಪೂರೈಸಲು ಹಾಗೂ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಹೆಚ್ಚುವರಿಯಾಗಿ ಪ್ರತಿನಿತ್ಯ 10 ಸಾವಿರ ಟನ್ ಕಲ್ಲಿದ್ದಲು ಒದಗಿಸಲು ಕ್ರಮ ಜರುಗಿಸಬೇಕು' ಎಂದು ಮುಖ್ಯಮಂತ್ರಿ ಡಿ.ವಿ.ಎಸ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಾಧ್ಯತೆ ಇದೆ.

ಕೇಂದ್ರ ಇಂಧನ ಸಚಿವ ಸುಶೀಲ್‌ಕುಮಾರ್ ಶಿಂಧೆ ಮತ್ತು ಕಲ್ಲಿದ್ದಲು ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರನ್ನು ಇಂದು ಸಂಜೆ ಭೇಟಿ ಮಾಡಿ, ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಅಭಾವ ಮತ್ತು ಕಲ್ಲಿದ್ದಲು ಕೊರತೆಯಿಂದ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳ ಮೇಲೆ ಆಗಿರುವ ಪ್ರತಿಕೂಲ ಪರಿಣಾಮ ವಿವರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಕಾರಣ ಆಂಧ್ರಪ್ರದೇಶದ ಸಿಂಗರೇಣಿಯಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲು ಪೂರೈಕೆ ಆಗುತ್ತಿಲ್ಲ. ವೆಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಿಂದ ಪೂರೈಕೆಯಾಗುತ್ತಿರುವ ಕಲ್ಲಿದ್ದಲು ಆರ್‌ಟಿಪಿಎಸ್‌ನ 8 ಘಟಕಗಳಿಗೆ ಸಾಕಾಗುತ್ತಿಲ್ಲ. ಈ ಪೈಕಿ 4-5 ಘಟಕಗಳಲ್ಲಿ ಮಾತ್ರ ಪ್ರಸ್ತುತ ವಿದ್ಯುತ್ ಉತ್ಪಾದನೆ ಆಗುತ್ತಿದೆ ಎಂದು ಗೌಡರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

English summary
Karnataka Chief Minister DV Sadananda Gowda will be travelling to Delhi to night to participate in a book release function. After that he is supposed to meet Central minister to pressurise to supply required power and Coal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X