ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರ ಕಸಬ್ ಗಲ್ಲುಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ

By Mahesh
|
Google Oneindia Kannada News

Ajmal Kasab
ನವದೆಹಲಿ, ಅ.10: ಮುಂಬೈ ಉಗ್ರರ ದಾಳಿಯಲ್ಲಿ ಬದುಕುಳಿದ ಏಕೈಕ ಪಾಕಿಸ್ತಾನಿ ಉಗ್ರ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್ ಗಲ್ಲುಶಿಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

2008ರಲ್ಲಿ ನಡೆದ ಮುಂಬೈ ಮೇಲಿನ ಉಗ್ರರ ದಾಳಿಯ ಪ್ರಮುಖ ಆರೋಪಿಯಾಗಿರುವ ಅಜ್ಮಲ್ ಕಸಬ್ ಗೆ ಮರಣದಂಡನೆ ಹೈಕೋರ್ಟ್ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವಕೀಲ ರಾಜು ರಾಮಚಂದ್ರನ್(amicus curie ಆಗಿ) ಸುಪ್ರೀಂಕೋರ್ಟ್ ನಲ್ಲಿ ಕಸಬ್ ಪರ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಿಚಾರಣೆ ನಡೆಸಿದ ಜಸ್ಟೀಸ್ ಅಫ್ತಾಬ್ ಅಲಂ ಹಾಗೂ ಜಸ್ಟೀಸ್ ಸಿ.ಕೆ. ಪ್ರಸಾದ್ ಅವರಿದ್ದ ನ್ಯಾಯಪೀಠ, ಕಸಬ್ ಪರ ತೀರ್ಪು ನೀಡಿದೆ.

166 ಜನರ ಸಾವಿಗೆ ಕಾರಣನಾಗಿರುವ ಕಸಬ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾನೆ. ಮೇ.6, 2010 ರಂದು ಮುಂಬೈ ಕೋರ್ಟ್ ನಲ್ಲಿ ಕಸಬ್ ಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆದೇಶಿಸಲಾಗಿತ್ತು.

English summary
The Supreme Court today(Oct.10) stayed the execution of Pakistani terrorist Ajmal Kasab, convicted for the Mumbai Terror Attack 2008.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X