ವಿದ್ಯುತ್ ಸಮಸ್ಯೆ ಕೊರತೆಯಾಗಿರುವುದು ಎಲ್ಲಿ?

Shobha Karandlaje UPA blame game
ಮಳೆಗಾಲ ಇನ್ನೇನು ಮುಗೀತು ಅನ್ನೋ ಹೊತ್ತಿಗಾಗಲೇ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ.

ದಿನವೊಂದಕ್ಕೆ 160 ಮಿಲಿಯನ್ ಯುನಿಟ್ ವಿದ್ಯುತ್ತಿಗೆ ಬೇಡಿಕೆ ಇದ್ದರೆ ಕೇವಲ 136 ಮಿಲಿಯನ್ ಯುನಿಟ್ ವಿದ್ಯುತ್ ಲಭ್ಯವಿದ್ದು, ಸುಮಾರು 24 ಮಿಲಿಯನ್ ಯುನಿಟ್ ವಿದ್ಯುತ್ತಿನ ಕೊರತೆ ಕರ್ನಾಟಕಕ್ಕೆ ಎದುರಾಗಿದೆ. ಕಲ್ಲಿದ್ದಲ್ಲಿನ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ ಅನ್ನುವುದು ಮಾಧ್ಯಮದಲ್ಲಿ ಕಂಡು ಬರುತ್ತಿರುವ ವರದಿಯಾಗಿದೆ.

ಅದೇನೇ ಇದ್ದರೂ ಜನರ ಜೀವನಾಡಿಯಾದ ವಿದ್ಯುತ್ ಪೂರೈಕೆಯ ಈ ಸಮಸ್ಯೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿರುವ ರೀತಿ ನೋಡಿದರೆ ಸಮಸ್ಯೆ ಬಗೆಹರಿಸುವುದಕ್ಕಿಂತ ಪರಸ್ಪರ ದೋಷಾರೋಪ, ಕೆಸೆರೆರೆಚಾಟಕ್ಕೆ ಹೆಚ್ಚು ಗಮನ ಕೊಟ್ಟಂತಿದೆ !

ಯಾವ ಯಾವ ಮೂಲದಿಂದ ಎಷ್ಟೆಷ್ಟು ವಿದ್ಯುತ್ ?:
ಕರ್ನಾಟಕದ ವಿದ್ಯುತ್ ಬೇಡಿಕೆ 160 ಮಿಲಿಯನ್ ಯುನಿಟ್ ಗಳಾಗಿದ್ದರೆ ಲಭ್ಯವಿರುವ ವಿದ್ಯುತ್ ಸುಮಾರು 136 ಮಿಲಿಯನ್ ಯುನಿಟ್ ಅನ್ನುತ್ತೆ ಕನ್ನಡಪ್ರಭ ವರದಿ.

ಈ 136 ಮಿಲಿಯನ್ ಯುನಿಟ್ ಅಲ್ಲಿ 50 ಮಿಲಿಯನ್ ಯುನಿಟ್ ಜಲ ವಿದ್ಯುತ್ ಮೂಲದಿಂದ ಬಂದರೆ, ಸುಮಾರು 26 ಮಿಲಿಯನ್ ಯುನಿಟ್ ಉಷ್ಣ ವಿದ್ಯುತ್ ಮೂಲದಿಂದಲೂ, ಬಾಕಿ 60 ಮಿಲಿಯನ್ ಯುನಿಟ್ ಹೊರ ರಾಜ್ಯ ಮತ್ತು ಕೇಂದ್ರ ಗ್ರಿಡ್ ನಿಂದ ರಾಜ್ಯ ಖರೀದಿಸುತ್ತೆ.

ಆಂಧ್ರಪ್ರದೇಶದಲ್ಲಿ ತೆಲಂಗಾಣ ರಾಜ್ಯಕ್ಕಾಗಿ ಒತ್ತಾಯಿಸಿ ನಡೆಯುತ್ತಿರುವ ಹೋರಾಟದಿಂದಾಗಿ ಅಲ್ಲಿನ ತೆಲಂಗಾಣ ಪ್ರಾಂತ್ಯದಲ್ಲಿರುವ ಸಿಂಗರೇಣಿ ಕಲ್ಲಿದ್ದಲು ಗಣಿಯಿಂದ ಕಲ್ಲಿದ್ದಲು ಪೂರೈಕೆಯಾಗದ ಹಿನ್ನೆಲೆಯಲ್ಲಿ ನಮ್ಮಲ್ಲೇ ಉತ್ಪಾದನೆಯಾಗುವ ಮತ್ತು ಕೇಂದ್ರ ಗ್ರಿಡ್ ನಿಂದ ದೊರಕುವ ಉಷ್ಣ ವಿದ್ಯುತ್ತಿನಲ್ಲಾಗಿರುವ ಕೊರತೆಯಿಂದಾಗಿ ಇವತ್ತು ಕತ್ತಲಲ್ಲಿ ಕೈ ತೊಳೆಯುವಂತಾಗಿದೆ.

ತಾಂತ್ರಿಕ ಸಮಸ್ಯೆಗಳ ಬಗ್ಗೆ ಹೆಚ್ಚು ಹೋಗದೇ ಈ ವಿಷಯದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ನಮ್ಮ ಮಂತ್ರಿಗಳ ಹೇಳಿಕೆ ನೋಡಿದರೆ ಸಮಸ್ಯೆಗೆ ಒಟ್ಟಾಗಿ ಪರಿಹಾರ ಕಂಡುಕೊಳ್ಳುವುದಕ್ಕಿಂತ ಹೆಚ್ಚಾಗಿ ಯಾರ ತಪ್ಪಿನಿಂದಾಗಿ ಈ ಸಮಸ್ಯೆ ತಲೆದೋರಿದೆ ಎಂದು ಆರೋಪಿಸುವುದರಲ್ಲೇ ಇಬ್ಬರಿಗೂ ಹೆಚ್ಚು ಸಮಾಧಾನವಾದಂತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+