ಡಾ. ಅನಂತಮೂರ್ತಿ ನೀಡಿರುವ ಸಕಾಲಿಕ ಸಲಹೆ ಏನು?

'ನಮ್ಮ ವಿಶ್ವವಿದ್ಯಾನಿಲಯಗಳು ಸಾಂಸ್ಕೃತಿಕ ಚಟುವಟಿಕೆಗಳಿಗೆ ಒತ್ತು ನೀಡಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಕಲೆ ಎಂಬುವುದು ಅಡಗಿರುತ್ತದೆ. ಇದನ್ನು ವಿಶ್ವವಿದ್ಯಾನಿಲಯಗಳು ಗುರುತಿಸಿ ಪ್ರೋತ್ಸಾಹಿಸಬೇಕಿದೆ' ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಜ್ಞಾನವಿರುತ್ತದೆ ಅದನ್ನು ಗುರುತಿಸಿಕೊಳ್ಳಲು ಸೂಕ್ತ ಅವಕಾಶ ನೀಡಿ, ಹಿಂದುಳಿದ ವಿದ್ಯಾರ್ಥಿಗಳು ಮುಂದುವರಿಯಲು ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶ ನೀಡಬೇಕಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಶಿಕ್ಷಕರೂ ಪಠ್ಯಕ್ಕೆ ಸಂಬಂಧವಿಲ್ಲದ ವಿಚಾರಗಳನ್ನು ಅನಗತ್ಯವಾಗಿ ಚರ್ಚಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದರ ಬದಲು ಮಕ್ಕಳಲ್ಲಿರುವ ಸಾಹಿತ್ಯ ರಸಕರಣವನ್ನು ಬೆಳೆಸಿ ಕಲೆ ಮತ್ತು ಸಂಸ್ಕೃತಿಯನ್ನು ಪಠ್ಯ ವಿಷಯವಾಗಿ ಕಲಿಸಬೇಕು ಎಂದು ಸಲಹೆ ನೀಡಿದರು.












Click it and Unblock the Notifications