ಮಂಗಳವಾರ ಆಸ್ಪತ್ರೆಯಿಂದ ಯಡಿಯೂರಪ್ಪ ಹೊರಕ್ಕೆ

ಜೈಲು ಹಕ್ಕಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಂಜಿಯೋಗ್ರಾಮ್ ಪರೀಕ್ಷೆ ನಡೆಸಿ ವರದಿ ಪಡೆಯಲಾಗಿದೆ. ಅವರಿಗೆ ಯಾವುದೇ ರೀತಿಯಲ್ಲೂ ಹೃದಯ ಸಂಬಂಧಿ ಕಾಯಿಲೆ ಇರುವುದು ಕಂಡು ಬಂದಿಲ್ಲ. ಮಂಗಳವಾರ(ಅ.17) ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಚ್ ಮಾಡುತ್ತೇವೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಜಯದೇವ ಆಸ್ಪತ್ರೆಯ ಆವರಣದಲ್ಲಿ ಡಾ.ಸಿಎನ್ ಮಂಜುನಾಥ್ ಅವರು ಸೋಮವಾರ ಸಂಜೆ 5.10ರ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿದರು.
ಆಂಜಿಯೋಗ್ರಾಮ್ ವರದಿಯ ಪ್ರಕಾರ, ಯಡಿಯೂರಪ್ಪ ಅವರ ರಕ್ತನಾಳದಲ್ಲಿ ಯಾವುದೇ ಬ್ಲಾಕೇಜ್ ಇಲ್ಲ. ರಕ್ತ ಸಂಚಲನ ಸರಾಗವಾಗಿದೆ. ರಕ್ತದೊತ್ತಡ, ಮಧುಮೇಹ ಎಲ್ಲವೂ ನಾರ್ಮಲ್ ಆಗಿದೆ. ಎದೆನೋವು ನಾನಾ ಕಾರಣಕ್ಕೆ ಬರುತ್ತದೆ. ಮಾನಸಿಕ ಒತ್ತಡ, ಸಕ್ಕರೆ ಕಾಯಿಲೆ, ಬಿಪಿ ಇರುವವರಿಗೆ ಎದೆ ನೋವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ.
ಭಾನುವಾರ ರಾತ್ರಿ ವೇಳೆ ಕೂಡಾ ಯಡಿಯೂರಪ್ಪ ಅವರಿಗೆ ಎದೆನೋವು ಕಾಣಿಸಿಕೊಂಡ ಬಗ್ಗೆ ದಾಖಲಾಗಿದೆ. ಹಾಗಾಗಿ ಯಡಿಯೂರಪ್ಪ ಅವರಿಗೆ ಆಂಜಿಯೋಗ್ರಾಮ್ ಪರೀಕ್ಷೆ ನಡೆಸಲಾಯಿತು ಎಂದು ಮಂಜುನಾಥ್ ಹೇಳಿದರು.
ಆಸ್ಪತ್ರೆಯಿಂದ ಮತ್ತೆ ಜೈಲಿಗೆ ಹೋಗ್ತಾರಾ ಯಡಿಯೂರಪ್ಪ...?












Click it and Unblock the Notifications