ಬರ: ವಿಶೇಷ ಅಧಿವೇಶನಕ್ಕೆ ಸಿದ್ದರಾಮಯ್ಯ ಆಗ್ರಹ

ಯಾದಗಿರಿ ಅಥಿತಿ ಗೃಹದಲ್ಲಿ ಜಿಲ್ಲೆಯ ಅಧಿಕಾರಿಗಳ ಜತೆ ಬರ ಸ್ಥಿತಿಯನ್ನು ಅಧ್ಯಯನ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯಾದಗಿರಿ ಜಿಲ್ಲೆಗೆ ಸುಮಾರು 300 ಕೋಟಿ ರು. ನಷ್ಟ ವಾಗಿದೆ. ಜಾನುವಾರುಗಳಿಗೆ ಮೇವಿನ ಬರ ಉಂಟಾಗಿದೆ. ಬಿಜೆಪಿ ಸರಕಾರ ನೆಪಮಾತ್ರಕ್ಕೆ ಬರಪೀಡಿತ ಜಿಲ್ಲೆಗಳೆಂದು ಘೋಷಣೆ ಮಾಡಿ ಕೈತೊಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾದಗಿರಿ ಜಿಲ್ಲೆಯಲ್ಲಿ 136 ಕಡೆ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಆದರೂ ಮುಂಜಾಗೃತಾ ಕ್ರಮವಾಗಿ ಒಂದು ಪೈಸೆ ಹಣವನ್ನು ಬಿಡುಗಡೆ ಮಾಡಿಲ್ಲ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ವಿದ್ಯುತ್ ಕೇವಲ ಎರಡು ಗಂಟೆ ಮಾತ್ರ ಸಿಗುತ್ತಿದೆ. ಆದರೆ ಈ ಸರಕಾರ ಜನರ ಸಮಸ್ಯೆ ಕಡೆ ಗಮನ ಹರಿಸುತ್ತಿಲ್ಲ. ಜನರ ಸಮಸ್ಯೆ ಪರಿಹರಿಸುವ ಮನಸ್ಸು ಇಲ್ಲದಿದ್ದರೆ ಕೂಡಲೆ ಅಧಿಕಾರದಿಂದ ಕೆಳಗೆ ಇಳಿಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಹೋರಾಟ: ವಿದ್ಯುತ್ ಕ್ಷಾಮ ನೀಗಿಸುವುದು, ಬರ ಪರಿಹಾರ ಕೆಲಸ ಆರಂಭಿಸುವುದು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಇದೇ ತಿಂಗಳು 21 ಮತ್ತು 22ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಸಿದ್ದರಾಮಯ್ಯ ತಿಳಿಸಿದರು. 21ರಿಂದ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪಂಜಿನ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಲಾಗುವುದು, 22ರಂದು ತಾಲೂಕು ಮಟ್ಟದಲ್ಲಿ ಹೋರಾಟಮಾಡಲಾಗುವುದು ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications