ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬರ: ವಿಶೇಷ ಅಧಿವೇಶನಕ್ಕೆ ಸಿದ್ದರಾಮಯ್ಯ ಆಗ್ರಹ

By * ಸಾಗರ ದೇಸಾಯಿ, ಯಾದಗಿರಿ
|
Google Oneindia Kannada News

Siddaramaiah insists for special session
ಯಾದಗಿರಿ, ಅ. 18 : ಬರಪೀಡಿತ ಜಿಲ್ಲೆಗಳಾದ ಗುಲಬರ್ಗ ಮತ್ತು ಯಾದಗಿರಿಯಲ್ಲಿ ರೈತರು ಕಂಗಾಲಾಗಿದ್ದಾರೆ, ಪರಿಹಾರಕ್ಕೆ ಪರಿತಪಿಸುತ್ತಿದ್ದಾರೆ, ಜಾನುವಾರುಗಳು ಸಾಯುತ್ತಿವೆ. ಸರಕಾರ ಕೂಡಲೆ ಅಧಿವೇಶನವನ್ನು ಕರೆದು ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಯಾದಗಿರಿ ಅಥಿತಿ ಗೃಹದಲ್ಲಿ ಜಿಲ್ಲೆಯ ಅಧಿಕಾರಿಗಳ ಜತೆ ಬರ ಸ್ಥಿತಿಯನ್ನು ಅಧ್ಯಯನ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯಾದಗಿರಿ ಜಿಲ್ಲೆಗೆ ಸುಮಾರು 300 ಕೋಟಿ ರು. ನಷ್ಟ ವಾಗಿದೆ. ಜಾನುವಾರುಗಳಿಗೆ ಮೇವಿನ ಬರ ಉಂಟಾಗಿದೆ. ಬಿಜೆಪಿ ಸರಕಾರ ನೆಪಮಾತ್ರಕ್ಕೆ ಬರಪೀಡಿತ ಜಿಲ್ಲೆಗಳೆಂದು ಘೋಷಣೆ ಮಾಡಿ ಕೈತೊಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾದಗಿರಿ ಜಿಲ್ಲೆಯಲ್ಲಿ 136 ಕಡೆ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಆದರೂ ಮುಂಜಾಗೃತಾ ಕ್ರಮವಾಗಿ ಒಂದು ಪೈಸೆ ಹಣವನ್ನು ಬಿಡುಗಡೆ ಮಾಡಿಲ್ಲ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ವಿದ್ಯುತ್ ಕೇವಲ ಎರಡು ಗಂಟೆ ಮಾತ್ರ ಸಿಗುತ್ತಿದೆ. ಆದರೆ ಈ ಸರಕಾರ ಜನರ ಸಮಸ್ಯೆ ಕಡೆ ಗಮನ ಹರಿಸುತ್ತಿಲ್ಲ. ಜನರ ಸಮಸ್ಯೆ ಪರಿಹರಿಸುವ ಮನಸ್ಸು ಇಲ್ಲದಿದ್ದರೆ ಕೂಡಲೆ ಅಧಿಕಾರದಿಂದ ಕೆಳಗೆ ಇಳಿಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹೋರಾಟ: ವಿದ್ಯುತ್ ಕ್ಷಾಮ ನೀಗಿಸುವುದು, ಬರ ಪರಿಹಾರ ಕೆಲಸ ಆರಂಭಿಸುವುದು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಇದೇ ತಿಂಗಳು 21 ಮತ್ತು 22ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಸಿದ್ದರಾಮಯ್ಯ ತಿಳಿಸಿದರು. 21ರಿಂದ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪಂಜಿನ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಲಾಗುವುದು, 22ರಂದು ತಾಲೂಕು ಮಟ್ಟದಲ್ಲಿ ಹೋರಾಟಮಾಡಲಾಗುವುದು ಎಂದರು.

English summary
Opposition party leader Siddaramaiah has asked BJP govt to call special session of both the houses to address drought situation in North Karnataka, including Yadgir and Gulbarga, and other parts of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X