ದಲಿತ ನಾಯಕ, ಮಾಜಿ ಶಾಸಕ ರಂಗನಾಥ್ ಇನ್ನಿಲ್ಲ

KH Ranganath demise
ಬೆಂಗಳೂರು, ಅ.18: ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಶಾಸಕ, ದಲಿತ ಮುಖಂಡ ಕೆಎಚ್ ರಂಗನಾಥ್ (86) ಅವರು ಕಿಡ್ನಿ ವೈಫಲ್ಯದಿಂದ ಮಂಗಳವಾರ ಬೆಳಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಂಗನಾಥ್ ಅವರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಂಗನಾಥ್ ಅವರನ್ನು ಕಿಡ್ನಿ ಡಯಾಲಿಸಿಸ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಅನುಯಾಯಿಯಾಗಿದ್ದ ರಂಗನಾಥ್ ಅವರು ಅರಸ್ ರಿಂದ ಹಿಡಿದು ಎಸ್ಎಮ್ ಕೃಷ್ಣ ಅವರ ಮಂತ್ರಿಮಂಡಲದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. 1972-74ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು.

ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಎಂಎಲ್ ಎ ಆಗಿ ಆಯ್ಕೆಯಾಗಿದ್ದರು. 1984-89 ರ ಅವಧಿಯಲ್ಲಿ ಲೋಕಸಭಾ ಸದಸ್ಯರಾಗಿ ಕೂಡಾ ಕಾರ್ಯ ನಿರ್ವಹಿಸಿದ್ದರು.

ರಾಜ್ಯ ಅಸೆಂಬ್ಲಿ ಸ್ಪೀಕರ್ ಆಗಿದ್ದ ಅವರು ಎಲ್ಲರೂ ಮೆಚ್ಚುವಂಥ ನಾಯಕರಾಗಿ ಗುರುತಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಅವರ ಸ್ವಂತ ಊರು ಹಿರಿಯೂರಿನಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+