ಶಾಸಕ ಸಂಗಮೇಶ್ ಬಂಧನ ಸನ್ನಿಹಿತ: ಕಾರಣವಾದರೂ ಏನು?

ಈ ವೇಳೆ ಶಾಸಕ ಸಂಗಮೇಶ್ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿ, ಬಂಧಿತರಿಬ್ಬರ ಪರವಾಗಿ ವಕಾಲತ್ತು ವಹಿಸಿದ್ದಾರೆ. ಅವರ ಮೇಲೆ ಯಾವುದೇ ಕೇಸ್ ಹಾಕದೆ, ಬಿಡುಗಡೆ ಮಾಡುವಂತೆ ಪೊಲೀಸರಿಗೆ ದಬಾಯಿಸಿದ್ದಾರೆನ್ನಲಾಗಿದೆ. ಅವರಿಬ್ಬರ ಬಿಡುಗಡೆ ಮಾಡುವಂತೆ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ.
ಆದರೆ ಶಾಸಕರ ಒತ್ತಡಕ್ಕೆ ಪೊಲೀಸರು ಸೊಪ್ಪುಹಾಕಿಲ್ಲ. ಕಾನೂನು ಪ್ರಕಾರ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಶಾಸಕ ಸಂಗಮೇಶ್, ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿ ಪರುಶುರಾಮಪ್ಪ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರನ್ನು ಹಿಡಿದು ಎಳೆದಾಡಿದ್ದಾರೆ ಎನ್ನಲಾಗಿದೆ. ಠಾಣೆಯಲ್ಲಿಯೇ ಕೆಲವು ಸಮಯ ರಾದ್ಧಾಂತ ಸೃಷ್ಟಿಸಿದ್ದಾರೆ. ಈ ವಿಷಯ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಅವರ ಸೂಚನೆಯಂತೆ ಶಾಸಕ ಸಂಗಮೇಶ್ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.












Click it and Unblock the Notifications