ಕಟ್ಟಾ ಕಣ್ಣಿಗೆ ಸುಣ್ಣ: ಅಶೋಕ್ ಮಹಾರಾಜ ಕಣ್ಣಿಗೆ ಬೆಣ್ಣೆ ?

ಆದರೆ, 2010ರ ಡಿಸೆಂಬರಿನಲ್ಲಿ ಬಿಜೆಪಿ ಮೊದಲ ಬಾರಿಗೆ ಇಂತಹ ಇಕ್ಕಟ್ಟಿನ ಪರಿಸ್ಥಿತಿ ಎದುರಿಸಿತ್ತು. ಕೆಐಎಡಿಬಿ ಭೂ ಹಗರಣದ ಸಂಬಂಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ ಮರುದಿನವೇ ಬಿಜೆಪಿ ಮುಖಂಡರು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆದಿತ್ತು ಎಂಬುದು ಗಮನಾರ್ಹ.
ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಅಶೋಕ ಪ್ರಕರಣಗಳಲ್ಲಿ ತುಸು ಭಿನ್ನತೆ ಇದೆ. ಕಟ್ಟಾ ವಿರುದ್ಧದ ಪ್ರಕರಣದಲ್ಲಿ ತನಿಖೆಗೆ ಪ್ರಬಲ ಸಾಕ್ಷ್ಯಾಧಾರಗಳು ಲಭ್ಯವಾದ ಬಳಿಕ ಲೋಕಾಯುಕ್ತ ಪೊಲೀಸರೇ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿ, ತನಿಖೆ ಮುಂದುವರಿಸಿದ್ದರು.
ಈಗ ಪರಿಸ್ಥಿತಿ ಬದಲಾಗಿದೆ. ಬಿಜೆಪಿಯ ಮುಖಂಡರೇ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಗೃಹ ಸಚಿವರೂ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುವಂತಾಗಿರುವುದು ಬಿಜೆಪಿಯ ಪಾಲಿಗೆ ನುಂಗಲಾರದ ತುತ್ತಾಗಿದೆ.












Click it and Unblock the Notifications