ಸಂಘ ತತ್ವಗಳಿಗೆ ಎಳ್ಳುನೀರು ಬಿಟ್ಟಿದ್ದೇ ಭ್ರಷ್ಟಾಚಾರಕ್ಕೆ ಕಾರಣ

ಆದರೆ, ಭ್ರಷ್ಟಾಚಾರಿಗಳು ಯಾವುದೇ ಪಕ್ಷದವರಾಗಿದ್ದರೂ, ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆರೆಸ್ಸೆಸ್ ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸಂಘ'ದಿಂದ ಬಂದ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಕೆಲ ಸಚಿವರು ಮತ್ತು ಶಾಸಕರು ಹಗರಣಗಳ ಆರೋಪ ಹೊತ್ತು ಕಾರಾಗೃಹ ಸೇರುತ್ತಿದ್ದಾರೆ. ಇದರಿಂದ ಪರಿವಾರಕ್ಕೆ ತೀವ್ರ ಮುಜುಗರವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸಂಘ ಪರಿವಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಹೋರಾಟ ಮುಂದುವರಿಸುತ್ತದೆ. ಭ್ರಷ್ಟಾಚಾರದಲ್ಲಿ ತೊಡಗಿರುವವರು ನೈತಿಕ ಹೊಣೆ ಹೊರಬೇಕು. ಮಾತ್ರವಲ್ಲ ಆತ್ಮಾವಲೋಕನ ಮಾಡಿಕೊಳ್ಳುವುದು ಸೂಕ್ತ ಎಂದ ಅವರು, ಬಿಜೆಪಿ ನೇತೃತ್ವದ ಸರಕಾರ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸ ಮಾಡಿದೆ. ಆದರೆ, ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ನುಡಿದರು.












Click it and Unblock the Notifications