ದೊಡ್ಡಬಳ್ಳಾಪುರ-ಬೆಂಗಳೂರು ದ್ವಿಪಥ ರಸ್ತೆಗೆ ಶಾಸಕ ನರಸಿಂಹಸ್ವಾಮಿ ಆಗ್ರಹ

ದೊಡ್ಡಬಳ್ಳಾಪುರದ ಜವಳಿ ಮತ್ತು ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸಲು ಪ್ರತಿ ದಿನವೂ 20 ಸಾವಿರಕ್ಕೂ ಹೆಚ್ಚು ಮಂದಿ, ವಿಶೇಷವಾಗಿ ಮಹಿಳಾ ಉದ್ಯೋಗಿಗಳು ಪ್ರಯಾಣ ಮಾಡುತ್ತಾರೆ. ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಪ್ರತಿ ದಿನವೂ 50,000 ವಾಹನಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳ ತಡೆಯಲು ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ನಡುವೆ ದ್ವಿಪಥ ರಸ್ತೆಯ ನಿರ್ಮಾಣ ಅತ್ಯಾವಶ್ಯಕ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದರ್ಗಾ ಜೋಗಿಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಘಾಟಿ ಸುಬ್ರಮಣ್ಯ ಕೇತ್ರದ ಬಳಿ ಇರುವ ವಿಶ್ವೇಶ್ವರಯ್ಯ ಪಿಕ್ ಅಪ್ ಪುನಶ್ಚೇತನ ಯೋಜನೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ ನರಸಿಂಹಸ್ವಾಮಿ, ಇದರಿಂದ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ದಿನದ 24 ಗಂಟೆಗಳೂ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.











Click it and Unblock the Notifications