ಗಣಿ ಅಕ್ರಮಗಾರಿಕೆ: ಅಧಿಕಾರಿಗಳಿಗೆ ನಡುಕ ಶುರು

K Jairam Committee report on illegal mining
ಬೆಂಗಳೂರು, ಸೆ.30: ಅಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತರು ನೀಡಿರುವ ವರದಿಯಲ್ಲಿ ಹೆಸರಿಸಲಾಗಿರುವ 787 ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವ ಅಧ್ಯಯನ ನಡೆಸಿದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜೈರಾಜ್ ನೇತೃತ್ವದ ಸಮಿತಿ ತನ್ನ ವರದಿಯನ್ನು ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರಿಗೆ ಸಲ್ಲಿಸಿದೆ.

316 ಪುಟಗಳ ವರದಿಯ ಮೇಲೆ ಶುಕ್ರವಾರ (ಅ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಧಿಕಾರ ವಿರುದ್ಧ ಯಾವ ರೀತಿ ಕ್ರಮ ಜರುಗಿಸ ಬಹುದು ಎಂದು ಸಂಪುಟ ನಿರ್ಧರಿಸಲಿದೆ.

ಜೈ ರಾಜ್ ಅವರು ನೀಡಿರುವ ವರದಿಯಲ್ಲಿ ಸುಮಾರು 600ಕ್ಕೂ ಹೆಚ್ಚು ಅಧಿಕಾರಿಗಳ ಹೆಸರು ಇದೆ. ಅಷ್ಟು ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ.

ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು. ಗಣಿ, ಭೂ ವಿಜ್ಞಾನ, ಪರಿಸರ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಅಧಿಕಾರಿಗಳ ಭ್ರಷ್ಟತೆಯ ವಿವರಗಳನ್ನು ನೀಡಲಾಗಿದೆ.

ಭ್ರಷ್ಟ ಐಎಎಸ್ ಗಳ ಕತೆ ಏನು?: ಅಕ್ರಮ ಗಣಿಗಾರಿಕೆಯಲ್ಲಿ ಐಎಎಸ್, ಐಪಿಎಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸರ್ವೇ ಇಲಾಖೆ ಹಾಗೂ ಐಎಫ್‌ಎಸ್ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ನೇರವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ.

ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ ಬಳಿಕ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ.ನಂತರ ಕೇಂದ್ರ ಸರ್ಕಾರಕ್ಕೆ ಕ್ರಮದ ಬಗ್ಗೆ ಶಿಫಾರಸ್ಸು ಮಾಡಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+