ಕೊಡಿಗೆಹಳ್ಳಿ ಭೂಹಗರಣ: ಅಶೋಕ್ ವಿರುದ್ಧ ಬಿತ್ತು ಮತ್ತೊಂದು ಕೇಸು

'ಬೆಂಗಳೂರು ಉತ್ತರ ತಾಲ್ಲೂಕು ವಿದ್ಯಾರಣ್ಯಪುರ ವ್ಯಾಪ್ತಿಯ ಕೊಡಿಗೆಹಳ್ಳಿಯಲ್ಲಿರುವ ಲೋಕ ಕಲ್ಯಾಣ ಪ್ರತಿಷ್ಠಾನಕ್ಕೆ ಸೇರಿದ 7 ಎಕರೆ 9 ಗುಂಟೆ ಜಾಗದ ಕೆಲವೊಂದು ದಾಖಲೆಗಳನ್ನು ತಿದ್ದಿ ಅಶೋಕ್ ತಮ್ಮ ಸಹೋದರಿಯ ಮಕ್ಕಳಾದ ಮಾರುತೀಶ್, ವಿನೋದ್‌ಕುಮಾರ್, ಪ್ರಶಾಂತ್‌ಕುಮಾರ್, ಕೆಂಪಣ್ಣ ಮತ್ತು ರಾಜಣ್ಣ ಎಂಬವರ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. ಇದಾದ ನಂತರ ಬಹುತೇಕ ಭೂಮಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಟ್ರಸ್ಟ್‌ನ ಸದಸ್ಯರಲ್ಲಿ ಒಬ್ಬರಾದ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರು ಇದಕ್ಕೆ ಸಹಕರಿಸಿದ್ದು, ಭೂಮಿ ಪರಭಾರೆಯಾಗಲು ಅವರೂ ಕಾರಣರಾಗಿದ್ದಾರೆ.
ಈ ಟ್ರಸ್ಟ್‌ನ ಸದಸ್ಯರಾದ ಮಾಜಿ ಶಾಸಕ ರಮೇಶ್ ಕುಮಾರ್ ಅವರಿಂದ ಜಾಗವನ್ನು ಖರೀದಿಸಿರುವಂತೆ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಸರ್ವೆ ನಂ.162/1, 163/1, 163/2 ಮತ್ತು 164/7ಕ್ಕೆ ಸೇರಿದ ಈ ಜಾಗದ ಒಟ್ಟು ಮೌಲ್ಯ 175 ಕೋಟಿ ರೂಪಾಯಿ. ಅಲ್ಲಿ ಈಗ ಅಪಾರ್ಟ್‌ಮೆಂಟ್‌ಗಳನ್ನು ಕಟ್ಟಿಸಲಾಗುತ್ತಿದೆ ಎಂದು ಜಗದೀಶ್ ಕುಮಾರ್ ದೂರಿದ್ದಾರೆ.
ರಾಜ್ಯಪಾಲರ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಯಲಹಂಕ ತಹಶೀಲ್ದಾರ್ ಅವರಿಗೆ ಈಗಾಗಲೇ ದೂರು ನೀಡಲಾಗಿದೆ. ಇದರ ಜತೆಗೆ ಲೋಕಾಯುಕ್ತಕ್ಕೂ ದೂರು ನೀಡಿದ್ದೇನೆ. ಈ ಕುರಿತು ಅಶೋಕ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಾಗಿ ಜಗದೀಶ್ ಕುಮಾರ್ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications