ರೆಡ್ಡಿ ಗಣಿಗಾರಿಕೆ: ಸಿಬಿಐನಿಂದ ಆಂಧ್ರ ಮಾಜಿ ಗಣಿ ಸಚಿವೆ ವಿಚಾರಣೆ

ap-ex-mining-minister-sabitha-reddy-interrogated-by-cbi
ಹೈದರಾಬಾದ್, ಅ. 30: ಆಂಧ್ರಪ್ರದೇಶದ ಹಾಲಿ ಗೃಹ ಸಚಿವೆ ಮತ್ತು ಈ ಹಿಂದೆ ಗಣಿ ಸಚಿವೆಯೂ ಆಗಿದ್ದ ಸಬಿತಾ ಇಂದ್ರಾ ರೆಡ್ಡಿ ಅವರನ್ನು ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿಯ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಮತ್ತು ಶನಿವಾರ ತನಿಖೆಗೆ ಒಳಪಡಿಸಿದೆ. ಸಿಬಿಐ ಅಧಿಕಾರಿಗಳ ತಂಡವು ಶುಕ್ರವಾರ ರಾತ್ರಿ 11 ಗಂಟೆಯವರೆಗೆ ಸಚಿವೆಯನ್ನು ಅವರ ಕಚೇರಿಯಲ್ಲಿ ಸುಮಾರು ಎರಡು ತಾಸು ಪ್ರಶ್ನಿಸಿದ್ದಾರೆ.

ಕರ್ನಾಟಕ ಗಡಿಯ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಹೊತ್ತ ಜನಾರ್ದನ ರೆಡ್ಡಿಯವರ ಓಬಳಾಪುರಂ ಗಣಿ ಕಂಪೆನಿಗೆ (ಓಎಂಸಿ) ಗಣಿ ಗುತ್ತಿಗೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಸಬಿತಾ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿತು.

ಮಾಜಿ ಮುಖ್ಯಮಂತ್ರಿ ದಿವಂಗತ ವೈ.ಎಸ್. ರಾಜಶೇಖರ ರೆಡ್ಡಿಯವರ ಸಂಪುಟದಲ್ಲಿ 2004ರಿಂದ 2009ರವರೆಗೆ ಸಬಿತಾ ಗಣಿ ಸಚಿವರಾಗಿದ್ದಾಗ, ಓಎಂಸಿಗೆ ಕಬ್ಬಿಣದ ಅದಿರಿನ ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಈ ಅವಧಿಯಲ್ಲಿ ಗಣಿ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಶ್ರೀಲಕ್ಷ್ಮೀ ಅವರನ್ನು ಸಿಬಿಐ ತಂಡವು ಮತ್ತೊಮ್ಮೆ ಸುಮಾರು ನಾಲ್ಕು ಗಂಟೆಗಳ ಕಾಲ ತನಿಖೆಗೆ ಒಳಪಡಿಸಿದ ಕೂಡಲೇ ಸಬಿತಾ ಅವರನ್ನೂ ಪ್ರಶ್ನಿಸಿದೆ.

ಓಎಂಸಿಗೆ ಗಣಿ ಗುತ್ತಿಗೆ ಪರವಾನಗಿ ನೀಡುವಾಗ ನಿಯಮಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಈ ಮುನ್ನವೂ ಶ್ರೀಲಕ್ಷ್ಮೀ ಹಾಗೂ ಗಣಿ ಮತ್ತು ಭೂಗರ್ಭ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ. ರಾಜಗೋಪಾಲ್ ಅವರನ್ನು ತನಿಖೆಗೆ ಒಳಪಡಿಸಿತ್ತು.

ಸಬಿತಾ ಮತ್ತು ಶ್ರೀಲಕ್ಷ್ಮೀ ಅವರನ್ನು ಸಿಬಿಐ ತನಿಖೆಗೆ ಒಳಪಡಿಸುವ ಮೂಲಕ 2009ರಲ್ಲಿ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+