ಸರ್ಕಾರದಿಂದ ಕನ್ನಡಿಗರಿಗೆ ಒಂದು ಭರ್ಜರಿ ಉಡುಗೊರೆ
ಇವತ್ತು
ಭಾರತ ಒಕ್ಕೂಟದಲ್ಲಿ ಕರ್ನಾಟಕ ರಾಜ್ಯ ಸ್ಥಾಪನೆಯಾದ ದಿನ. ಸರಿಯಾಗಿ 55 ವರ್ಷದ ಹಿಂದೆ ಇದೇ ದಿನದಂದು ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಹಲವು ಭಾಗಗಳು ಆಲೂರು ವೆಂಕಟರಾಯರ ಮುಂದಾಳತ್ವದಲ್ಲಿ ನಡೆದ ದಶಕಗಳ ಕಾಲದ ಹೋರಾಟದ ಫಲವಾಗಿ ಒಂದಾದ ಸುದಿನ. id="toptextpromo">ಇಂತಹ
ದಿನವೊಂದನ್ನು ನೆನೆಯಲು ನಮ್ಮ ರಾಜ್ಯ ಸರ್ಕಾರ ಎಲ್ಲ ಕನ್ನಡಿಗರಿಗೆ ಒಂದು ಭರ್ಜರಿ ಉಡುಗೊರೆ ಕೊಡುತ್ತಿದೆ. ಏನು ಗೊತ್ತೇ? ಮಕ್ಕಳ ಸಂಖ್ಯೆ ಕಡಿಮೆಯಿದೆ ಅನ್ನುವ ನೆಪವೊಡ್ಡಿ ಸರಿ ಸುಮಾರು ಮೂರು ಸಾವಿರ ಶಾಲೆಗಳನ್ನು ಮುಚ್ಚುವ ನಿರ್ಧಾರ ! id='are-slot-1' class='oiad oi-axt oiadv'> id='top-searched-articles'>ಕನ್ನಡದ
ಮಕ್ಕಳ ಏಳಿಗೆಗೆ ಬುನಾದಿ ಹಾಕಬೇಕಾದ ಶಾಲೆಗಳನ್ನು ಒಳ್ಳೆ ಅವೆನ್ಯೂ ರಸ್ತೆಯಲ್ಲಿ ಅಂಗಡಿ ಇಟ್ಟಿರೋ ವ್ಯಾಪಾರಿ ರೀತಿಯಲ್ಲಿ ಲಾಭ-ನಷ್ಟದ ಕಣ್ಣಿಂದ ಅಳೆದು ಮುಚ್ಚುವ ನಿಲುವಿಗೆ ಬಂದಿರುವ ಸರ್ಕಾರ "ಸರಿಯಾದ ಕಲಿಕೆ ರೂಪಿಸುವುದು" ನಾಡಿನ ಮಕ್ಕಳ ಬಗ್ಗೆ ತನಗಿರುವ ಕರ್ತವ್ಯದಂತೆ ಕಾಣದೇ ವ್ಯಾಪಾರವೆಂಬಂತೆ ಕಾಣುತ್ತಿರುವುದು ಬರಲಿರುವ ದಿನಗಳ ದಿಕ್ಸೂಚಿಯೇನೊ ಅನ್ನಿಸುವಂತಿದೆ. ಮುಂದಿನ ಪುಟದಲ್ಲಿ ಲೇಖನ ಮುಂದುವರೆದಿದೆ..











Click it and Unblock the Notifications