ನ.19 ರಂದು ರಾಹುಲ್ ಪಟ್ಟಾಭಿಷೇಕ, ಮುಹೂರ್ತ ಫಿಕ್ಸ್

ಬಲ್ಲ ಮೂಲಗಳ ಪ್ರಕಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರ ಪಟ್ಟಾಭಿಷೇಕಕ್ಕೆ ನ.19ರಂದು ಮುಹೂರ್ತ ನಿಗದಿಪಡಿಸಲಾಗಿದೆ. ಭವಿಷ್ಯದ ಪ್ರಧಾನಿ ಎಂದೇ ಬಿಂಬಿತವಾಗಿರುವ ರಾಹುಲ್ ಅವರ ನೇತೃತ್ವದಲ್ಲಿ 2014ರ ಲೋಕಸಭೆ ಚುನಾವಣೆ ಎದುರಿಸುವ ಸ್ಪಷ್ಟ ಸೂಚನೆಯನ್ನು ನೀಡಿದೆ.
150 ವರ್ಷಗಳ ಸುಧೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿರುವುದಾಗಿ ಸೋನಿಯಾ ಮೇಡಂ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಒಮ್ಮತ ಸೂಚಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರು ವಿಶ್ರಾಂತಿ ಜೀವನದ ಲೆಕ್ಕಾಚಾರದಲ್ಲಿದ್ದು ತಮ್ಮ ಜವಾಬ್ದಾರಿಗಳನ್ನು ಒಂದೊಂದಾಗಿ ಆಪ್ತರಿಗೆ ವಹಿಸಿಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮನಮೋಹನ್ ಸಿಂಗ್ ಅವರನ್ನು ರಾಷ್ಟ್ರಪತಿ ಕುರ್ಚಿಯಲ್ಲಿ ಕೂರಿಸಲಾಗುವುದು. ಪ್ರಿಯಾಂಕಾ ಸ್ಪರ್ಧೆ ಎಲ್ಲವೂ ಸೋನಿಯಾ ಪಟ್ಟಿಯಲ್ಲಿದೆ.












Click it and Unblock the Notifications