ರೆಸಾರ್ಟ್ ರಾಜಕೀಯ: ಕಾಂಗ್ರೆಸ್ ಮುಖಂಡರ ಸಭೆ ಇಂದು

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪಕ್ಷದ ಹಿರಿಯ ಮುಖಂಡರು ಸಭೆ ಸೇರಲಿದ್ದಾರೆ.
ಈ ಸಂಬಂಧ 37 ಮಂದಿ ಹಿರಿಯರ ಪಟ್ಟಿಯನ್ನು ಸಿದ್ಧಪಡಿಸಿ ಸಭೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂದೇಶ ರವಾನಿಸಿದ್ದಾರೆ. ಕೇಂದ್ರ ಸಚಿವರಾದ ಎಸ್.ಎಂ.ಕೃಷ್ಣ, ಎಂ.ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಆಸ್ಕರ್ ಫರ್ನಾಂಡಿಸ್, ಬಿ.ಕೆ.ಹರಿಪ್ರಸಾದ್, ಕಾರ್ಯದರ್ಶಿಗಳಾದ ವಿನಯಕುಮಾರ್ ಸೊರಕೆ, ಕೆ.ಬಿ.ಕೃಷ್ಣಮೂರ್ತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇವರಲ್ಲದೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸೇರಿದಂತೆ ಕೆಪಿಸಿಸಿಯ ಇತರ ಮಾಜಿ ಅಧ್ಯಕ್ಷರು, ಮಾಜಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದರನ್ನು ಈ ಸಭೆಗೆ ಆಹ್ವಾನಿಸಲಾಗಿದೆ. ಭಾನುವಾರ ಇಡೀ ದಿನ ಸಭೆ ನಡೆಯಲಿದೆ.











Click it and Unblock the Notifications