ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಸಾರ್ಟ್ ರಾಜಕೀಯ: ಕಾಂಗ್ರೆಸ್ ಮುಖಂಡರ ಸಭೆ ಇಂದು

By Srinath
|
Google Oneindia Kannada News

kpcc-meet-in-banaglore-resort-nov-6
ಬೆಂಗಳೂರು, ನ. 6: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ರಾಜ್ಯ ಕಾಂಗ್ರೆಸ್ ಪಕ್ಷ ಭಾನುವಾರ ಬಿಡದಿ ಬಳಿ ರಾಯಲ್ ಅರ್ಕಿಡ್ ನಲ್ಲಿ ಮಹತ್ವದ ಚಿಂತನ ಸಭೆ ಆಯೋಜಿಸಿದೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ರೆಸಾರ್ಟಿನಲ್ಲಿ ರಾಜಕೀಯ ಸಭೆ ಹಮ್ಮಿಕೊಂಡಿರುವುದು ಗಮನಾರ್ಹ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪಕ್ಷದ ಹಿರಿಯ ಮುಖಂಡರು ಸಭೆ ಸೇರಲಿದ್ದಾರೆ.

ಈ ಸಂಬಂಧ 37 ಮಂದಿ ಹಿರಿಯರ ಪಟ್ಟಿಯನ್ನು ಸಿದ್ಧಪಡಿಸಿ ಸಭೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂದೇಶ ರವಾನಿಸಿದ್ದಾರೆ. ಕೇಂದ್ರ ಸಚಿವರಾದ ಎಸ್.ಎಂ.ಕೃಷ್ಣ, ಎಂ.ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಆಸ್ಕರ್ ಫರ್ನಾಂಡಿಸ್, ಬಿ.ಕೆ.ಹರಿಪ್ರಸಾದ್, ಕಾರ್ಯದರ್ಶಿಗಳಾದ ವಿನಯಕುಮಾರ್ ಸೊರಕೆ, ಕೆ.ಬಿ.ಕೃಷ್ಣಮೂರ್ತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇವರಲ್ಲದೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸೇರಿದಂತೆ ಕೆಪಿಸಿಸಿಯ ಇತರ ಮಾಜಿ ಅಧ್ಯಕ್ಷರು, ಮಾಜಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದರನ್ನು ಈ ಸಭೆಗೆ ಆಹ್ವಾನಿಸಲಾಗಿದೆ. ಭಾನುವಾರ ಇಡೀ ದಿನ ಸಭೆ ನಡೆಯಲಿದೆ.

English summary
A special meeting of senior leaders has been convened here by the Karnataka Pradesh Congress Committee on Sunday to discuss, among other things, the failure to win the byelections to the Assembly despite the poor credibility of the Bharatiya Janata Party Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X