ರಾಹುಲ್ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿ, ಬಂಧನ

ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಬೆಂಬಲಿಗರ ಮೇಲೆ ರಾಮಲೀಲಾ ಮೈದಾನದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದಿಂದ ಬೇಸತ್ತಿದ್ದ ಸೈನಿ, ರಾಹುಲ್ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ಖಾತೆ ತೆರೆದು ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದ.
ಸೈನಿ ಕಾಂಗ್ರೆಸ್ ನಾಯಕರಿಗೆ, ಮಹಿಳಾ ಮೋರ್ಚಾದ ಸದಸ್ಯರಿಗೆ ಮತ್ತು ಅನೇಕ ಮಹಿಳೆಯರಿಗೆ ಸಲ್ಲದ ಸಂದೇಶಗಳನ್ನು ಕಳುಹಿಸಿ ಕಿರಿಕಿರು ಉಂಟುಮಾಡುತ್ತಿದ್ದ. ಮಧ್ಯಪ್ರದೇಶ ಕಾಂಗ್ರೆಸ್‌ನ ವಕ್ತಾರ ಪಂಕಜ್ ಚತುರ್ವೇದಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಕಾರ್ಯಾಚರಣೆಗೆ ಇಳಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಹುಲ್ ಗಾಂಧಿ ಫೇಸ್ ಬುಕ್ ಪ್ರೊಫೈಲ್ ಸೃಷ್ಟಿಸಿದ್ದ ಸೈನಿಯ ಲ್ಯಾಪ್‌ಟಾಪ್, ಮೊಬೈಲ್ ಗಳನ್ನು ಸೈಬರ್ ಕ್ರೈಂ ಇಲಾಖೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಸೈನಿ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆತನನ್ನು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.












Click it and Unblock the Notifications