ಶ್ರೀರಾಮನಿಗೇ ನಮ್ಮ ಅಖಂಡ ನಿಷ್ಠೆ: ಪಕ್ಷೇತರ ಶಾಸಕ ಗೂಳಿಹಟ್ಟಿ
ಬಳ್ಳಾರಿ,
ನ. 10: ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಶ್ರೀರಾಮುಲುಗೇ ತಮ್ಮಅಖಂಡ ನಿಷ್ಠೆ ಎಂದು ರಾಜ್ಯ ಪಕ್ಷೇತರ ಶಾಸಕರ ಪರ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಘೋಷಿಸಿದ್ದಾರೆ. ಶ್ರೀರಾಮುಲು ಪರ ಪ್ರಚಾರ ಮಾಡುವುದಾಗಿ ಹೇಳಿದ ಅವರು, ಇತರ ಪಕ್ಷೇತರ ಶಾಸಕರು ಕೂಡ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು. id="toptextpromo">ಬುಧವಾರ
ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೂಳಿಹಟ್ಟಿ, ಶ್ರೀರಾಮುಲು ಮತ್ತು ಜನಾರ್ದನರೆಡ್ಡಿ ಅವರ ಮುಖ ನೋಡಿ ಜನ ಬಿಜೆಪಿಗೆ ಮತ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಪರಿಶಿಷ್ಟ ಮುಖಂಡರನ್ನು ಒಂದಲ್ಲೊಂದು ರೀತಿಯಲ್ಲಿ ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಗುಡುಗಿದರು. id='are-slot-1' class='oiad oi-axt oiadv'> id='top-searched-articles'>ಆದರೆ
ಪಕ್ಷವು ರೆಡ್ಡಿ ಸೋದರರನ್ನೇ ಕಡೆಗಣಿಸಿದ್ದು ಸರಿಯಲ್ಲ. ಬಿಜೆಪಿ ಸರ್ಕಾರ ಇದಕ್ಕೆ ತಕ್ಕ ಪ್ರತಿಪಲ ಅನುಭವಿಸಲಿದೆ ಎಂದು ಎಚ್ಚರಿಕೆ ನೀಡಿದ ಗೂಳಿಹಟ್ಟಿ ಶೇಖರ್, ಈ ಉಪಚುನಾವಣೆ ಮೂಲಕ ಕೆಳ ವರ್ಗದವರಿಗೆ ನ್ಯಾಯ ದೊರಕಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.











Click it and Unblock the Notifications