ಹಿಂಡು ಹಿಂಡು ಪೊಲೀಸ್ ಅಧಿಕಾರಿಗಳ ವರ್ಗಾವಣೆ

228 police officers transferred
ಬೆಂಗಳೂರು, ನ. 12 : ಲೋಕಾಯುಕ್ತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಾರ್ವಜನಿಕ ವಲಯದ ಆಕ್ರೋಶಕ್ಕೆ ಗುರಿಯಾಗಿರುವ ಡಿವಿ ಸದಾನಂದ ಗೌಡರ ಬಿಜೆಪಿ ಸರಕಾರ ರಾತ್ರೋರಾತ್ರಿ 228 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಒಟ್ಟು 48 ಡಿವೈಎಸ್‌ಪಿ, 107 ಸಬ್ ಇನ್‌ಸ್ಪೆಕ್ಟರ್ ಮತ್ತು 73 ಸಬ್ ಇನ್‌ಸ್ಪೆಕ್ಟರ್‌ಗಳನ್ನು ಸರಕಾರ ವರ್ಗಾವಣೆ ಮಾಡಿದೆ. ಇದು ಕಳೆದ ರಾತ್ರಿಯಿಂದಲೇ ಜಾರಿಗೆ ಬಂದಿದೆ. ತಮಗೆ ಅನುಕೂಲವಾಗುವಂತಹ ಜಾಗಕ್ಕೆ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗ ಮಾಡಲಾಗಿದೆ ಎಂಬ ದೂರುಗಳು ಬರುತ್ತಿವೆ.

ಬಳ್ಳಾರಿ ಉಪ ಚುನಾವಣೆಗೆ ದಿನಗಣನೆ ಆರಂಭವಾಗಿರವವ ಹಂತದಲ್ಲಿ ಇಷ್ಟೊಂದು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಪೊಲೀಸ್ ಇಲಾಖೆಯನ್ನು ದಂಗುಬಡಿಸಿದೆ. ವಿರೋಧ ಪಕ್ಷದ ನಾಯಕರು ಈ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಧ್ಯಂತರ ಚುನಾವಣೆಯ ಮುನ್ಸೂಚನೆಯನ್ನರಿತು ಪೊಲೀಸ್ ಇಲಾಖೆಯಲ್ಲಿ ಈ ವರ್ಗಾವಣೆಗಳನ್ನು ಸರಕಾರ ಮಾಡಿರಬಹುದೆ ಎಂಬ ಶಂಕೆ ಮೂಡುವಂತೆ ಮಾಡಿದೆ. ಇದೇ ನ.30ರಂದು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+