ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಬಿಎಂಪಿಯಲ್ಲಿ ಕೋಟ್ಯಂತರ ರೂ ಹಗರಣ, ಸರ್ಕಾರ ನಿದ್ದೆ

By Mahesh
|
Google Oneindia Kannada News

G Parameshwar
ಬೆಂಗಳೂರು, ನ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ ಎಲ್ಲಾ 198 ವಾರ್ಡ್‌ಗಳಲ್ಲಿ ನಡೆದಿರುವ ಸುಮಾರು 15 ಸಾವಿರ ಕೋಟಿ ರೂ ಅವ್ಯಹಾರ ನಡೆದಿದೆ ಈ ಹಗರಣದ ತನಿಖೆರನ್ನು ಸಿಬಿಐಗೆ ವಹಿಸುವಂತೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಾಮ ಗಾರಿಗಳ ಹೆಸರಲ್ಲಿ ಕೋಟ್ಯಂತರ ರೂ. ದುರಪಯೋಗಪಡಿಸಿಕೊಳ್ಳಲಾಗಿದೆ ಎಂದು ಸ್ವತಃ ಪಾಲಿಕೆ ಆಯುಕ್ತರೇ ಬಿಎಂಟಿಎಫ್‌ಗೆ ದೂರು ನೀಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ 1,539 ಕೋಟಿ ರೂ. ಅವ್ಯವಹಾರ ನಡೆದಿದೆ.

ಆದರೆ ಸರ್ಕಾರದ ಹಿಡಿತದಲ್ಲಿರುವ ಬಿಎಂಟಿಎಫ್ ಅಥವಾ ಇತರ ಯಾವುದೇ ಸ್ಥಳೀಯ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದು ಸಾಧ್ಯವಿಲ್ಲ. ಇದಕ್ಕೆ ಸಿಬಿಐ ತನಿಖೆ ಸೂಕ್ತ ಎಂದು ಪರಮೇಶ್ವರ್ ಪ್ರತಿಪಾದಿಸಿದರು.

ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಅವ್ಯವಹಾರ ನಡೆದಿಲ್ಲ. ಬದಲಾಗಿ ಪಾಲಿಕೆ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳ 198 ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿ ಗಳಲ್ಲಿ ಸುಮಾರು 15 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ.

ಬಿಬಿಎಂಪಿಯಲ್ಲಿ ನಡೆದಿರುವ ಕೋಟ್ಯಂತರ ರೂ. ಅವ್ಯವಹಾರವನ್ನು ಬಯಲಿಗೆಳೆದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲು ಪ್ರಯತ್ನಿಸುತ್ತಿರುವ ಪಾಲಿಕೆ ಆಯುಕ್ತ ಸಿದ್ದಯ್ಯರನ್ನು ವರ್ಗಾ ವಣೆ ಮಾಡಲು ಅಥವಾ ಅಮಾನತು ಗೊಳಿಸಲು ಸರಕಾರ ಪ್ರಯತ್ನ ನಡೆಸುತ್ತಿದೆ.

ಒಂದು ವೇಳೆ ಸಿದ್ದಯ್ಯರನ್ನು ವರ್ಗಾವಣೆ ಅಥವಾ ಅಮಾನತಿನ ಲ್ಲಿಟ್ಟರೆ ಕಾಂಗ್ರೆಸ್ ಅವರ ಪರ ನಿಂತು ಸರಕಾರದ ವಿರುದ್ಧ ಹೋರಾಟ ಮಾಡಲಿದೆ ಎಂದು ಪರಮೇಶ್ವರ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್‌ಗಳಾದ ರಾಮಚಂದ್ರಪ್ಪ, ಪಿ.ಆರ್. ರಮೇಶ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಉದಯ ಕುಮಾರ್ ಉಪಸ್ಥಿತರಿದ್ದರು.

ಈ ಹಗರಣವನ್ನು ನಾಗರಿಕ ಲೆಕ್ಕಪರಿಶೋಧ ನೆಗೆ ಒಳಪಡಿಸಬೇಕು ಮತ್ತು ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದ ಪರಮೇಶ್ವರ್, ಇಲ್ಲವಾದಲ್ಲಿ ಕಾಂಗ್ರೆಸ್ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

English summary
KPCC president G Parameshwar urged Bruhat Bengaluru Mahanagara Palike(BBMP) has looted public money in all 198 wards. BJP government is making any investigation but trying to sack commissioner Siddaiah. Congress will support Siddaiah and protest against BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X