ಕುಮಾರಸ್ವಾಮಿ ನನ್ನ ಆತ್ಮೀಯ ಸ್ನೇಹಿತ : ಶ್ರೀರಾಮುಲು

ಟಿವಿ9 (ಚಕ್ರವ್ಯೂಹ) ಮತ್ತು ಸುವರ್ಣ ನ್ಯೂಸ್ (ಟಾರ್ಗೆಟ್) ಭಾನುವಾರ (ನ.13) ಏಕಕಾಲದಲ್ಲಿ ಪ್ರಸಾರವಾದ ಕಾರ್ಯಕ್ರಮಗಳಲ್ಲಿ ತೆಲುಗು ಮಿಶ್ರಿತ ಕನ್ನಡ ಮಾತನಾಡುತ್ತಿದ್ದ ಶ್ರೀರಾಮುಲು, "ನಾನು ಸ್ವಾಭಿಮಾನಿ ಮನುಷ್ಯ, ನನಗೆ ಬಿಜೆಪಿಯಿಂದ ನೋವಾಗಿದೆ, ಅದಕ್ಕಾಗಿ ಪಕ್ಷವನ್ನು ತೊರೆದೆ. ದೇವರಲ್ಲಿ ನಂಬಿಕೆ ಇರುವವನು ನಾನು. ಬಡವರನ್ನು ಕಂಡರೆ ನನಗೆ ಕನಿಕರವಿದೆ. ಜನರು ಕಷ್ಟ ಎಂದು ಬಂದಾಗ ನನ್ನ ಮನೆ ಅವರಿಗೆ ಕೊಡಲೂ ನಾನು ಹಿಂದೆ ಮುಂದೆ ನೋಡುವಂಥ ಮನುಷ್ಯನಲ್ಲ" ಎಂದು ಮನದಾಳದ ಮಾತನ್ನು ಹೊರಗೆಡವಿದರು.
"ಬಳ್ಳಾರಿ ಅಲ್ಲದೆ ಉತ್ತರ ಕರ್ನಾಟಕದ ಭಾಗದಲ್ಲಿ ಜನರು ನನ್ನನ್ನು ಪ್ರೀತಿಯಿಂದ ಕಾಣುತ್ತಾರೆ. ಅವರ ಮನೆಮಗನಾಗಿ ಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಮತ್ತು ಕುಮಾರಸ್ವಾಮಿ ನಡುವೆ ರಾಜಕೀಯ ಸಂಬಂಧವೇನೂ ಇಲ್ಲ. ಜಾತ್ಯತೀತ ಜನತಾದಳ ಬಳ್ಳಾರಿ ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ನಿಲ್ಲಿಸದೇ ಇರುವುದು ಆ ಪಕ್ಷದ ನಿರ್ಧಾರ ಹೊರತು ಬೇರೇನೂ ಇಲ್ಲ" ಎಂದು ಶ್ರೀರಾಮುಲು, ತಮ್ಮ ವಿರುದ್ಧ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದ ಬಗ್ಗೆ ಸ್ಪಷ್ಟಪಡಿಸಿದರು.
ಈ ಮರುಚುನಾವಣೆಯಲ್ಲಿ ಜನರು ನನ್ನನ್ನು ಆಶೀರ್ವದಿಸುತ್ತಾರೆ ಎನ್ನುವ ನಂಬಿಕೆ ನನಗಿದೆ. ನಮ್ಮ ಬಳಿ ದುಡ್ಡು ಇದೆ, ದುಡ್ಡು ಕೊಟ್ಟು ವೋಟು ಖರೀದಿಸುತ್ತಾರೆ ಎನ್ನುವ ಮಾತು ಸುಳ್ಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ನನ್ನ ಭಾಗದ ಜನರನ್ನು ಪ್ರೀತಿ ವಿಶ್ವಾಸದಿಂದ ಕಂಡಿದ್ದೇನೆ. ಇದೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಅವರು ವಿಶ್ವಾಸದಿಂದ ನುಡಿದರು. ಮುಂದುವರಿಯಲಿದೆ....
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications