ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರವಿಶಂಕರ್ ಗುರೂಜಿ ಆಶ್ರಮ ಅಕ್ರಮ: ಹೈಕೋರ್ಟ್ ನೋಟಿಸ್

By Srinath
|
Google Oneindia Kannada News

ಬೆಂಗಳೂರು, ನ. 16: ಕನಕಪುರ ರಸ್ತೆಯಲ್ಲಿರುವ ಉದಯಪಾಳ್ಯ ಕೆರೆಯನ್ನು ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಒತ್ತುವರಿ ಮಾಡಿಕೊಂಡು ಐಷಾರಾಮಿ ಕಟ್ಟಡಗಳನ್ನು ನಿರ್ಮಿಸಿದೆ. ಇದರಿಂದ ಕೆರೆಯ ಪರಿಸರಕ್ಕೆ ಧಕ್ಕೆಯಾಗುವುದರ ಜತೆಗೆ ಜಲಚರಗಳು ಹಾಗೂ ಪ್ರಾಣಿ ಪಕ್ಷಿಗಳಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿ ವಕೀಲ ಶ್ರೀರಾಮರೆಡ್ಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿವಾದಿತ ಜಾಗದಲ್ಲಿ ಯಾವುದೇ ಕಾಮಗಾರಿಗಳ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರವಿಶಂಕರ್ ಗುರೂಜಿಯ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಆದೇಶ ನೀಡಿದೆ.

ವಕೀಲ ಶ್ರೀರಾಮರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ವಿ.ಜೆ. ಸೇನ್ ಮತ್ತು ನ್ಯಾ.ಎ.ಎಸ್. ಬೋಪಣ್ಣ ಅವರಿದ್ದ ವಿಭಾಗೀಯ ಪೀಠ, ವಿವಾದಿತ ಪ್ರದೇಶದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿರ್ದೇಶಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣಾ ಹೇಳಿಕೆ ಸಲ್ಲಿಸುವಂತೆ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ನಿರ್ದೇಶಿಸಿದ ಮುಖ್ಯ ನ್ಯಾಯಮೂರ್ತಿ, ವಿಚಾರಣೆಯನ್ನು ಡಿ. 13ಕ್ಕೆ ಮುಂದೂಡಿದರು.

ಪ್ರಕರಣದ ತಿರುಳೇನು?: ಕಗ್ಗಲೀಪುರ ಬಳಿ ಸರ್ವೇ ನಂ. 46ರಲ್ಲಿರುವ ಉದಯಪಾಳ್ಯ ಕೆರೆ ಸೇರಿದಂತೆ ಸುತ್ತಮುತ್ತಲ ಅರಣ್ಯ ಭೂಮಿಯನ್ನು ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಕೆರೆಯ ಸುತ್ತಮುತ್ತ 14.18 ಹೆಕ್ಟೇರ್ ನೀರಾವರಿ ಪ್ರದೇಶ, 42.52 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಮತ್ತು 1.6 ಮೀ. ಕಾಲುವೆಯನ್ನು ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆಗೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.

English summary
Spiritual leader Sri Ravi Shankar Guruji's the Art of Living foundation has encroached land around a lake in Kaggalipura on Kanakapur road says a PIL filed by an advocate. As such the High Court has ordered to stop any construction work on the land till further orders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X