ಅಖಾಡಕ್ಕೆ ಇಳಿಯುವ ಮುನ್ನ ಯಡಿಯೂರಪ್ಪಗೆ ರವಿಶಂಕರ್ ಆಶೀರ್ವಾದ

bellary-by-polls-bsy-meets-ravishankar-guruji
ಬೆಂಗಳೂರು, ನ.17: ಬಳ್ಳಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಂಬಂಧಿಸಿದಂತೆ ಚರ್ಚಿಸಲು ಬಿಜೆಪಿ ಪಕ್ಷದ ಶಾಸಕರು, ಸಂಸದರ ಸಭೆ ಗುರುವಾರ ನಡೆಯಲಿದೆ. ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಿಎಂ ಯಡಿಯೂರಪ್ಪ ಬಳ್ಳಾರಿ ಉಪ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಮೂಲಕ ತನ್ನ ಬಲಾಬಲ ಪ್ರದರ್ಶನಕ್ಕೆ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿದ್ದು, ಪಕ್ಷದಲ್ಲಿ ತನ್ನನ್ನು ನಿರ್ಲಕ್ಷಿಸಲಾಗುತ್ತಿದೆ. ಆದುದರಿಂದ ಈ ಬಗ್ಗೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಮೇಲೆ ಒತ್ತಡ ಹೇರುವ ಕುರಿತು ಗುರೂಜಿ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ ಆಪ್ತ ಅಬಕಾರಿ ಸಚಿವ ರೇಣುಕಾಚಾರ್ಯ, ಯಡಿಯೂರಪ್ಪ ಹೊಸ ಪಕ್ಷ ಕಟ್ಟಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಅವರ ನೇತೃತ್ವದಲ್ಲೆ ಬಳ್ಳಾರಿ ಉಪ ಚುನಾವಣೆ ಎದುರಿಸಿದರೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧ್ಯ ಎಂದು ತಿಳಿಸಿದ್ದಾರೆ.

ತಾನು ಸುಮಾರು 40 ವರ್ಷಗಳ ಕಾಲ ಹೋರಾಟದ ಮೂಲಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿದ್ದು, ಪಕ್ಷದಿಂದ ಹೊರ ಹೋಗುವ ಯಾವುದೇ ಆಲೋಚನೆ ಮಾಡಿಲ್ಲ ಎಂದ ಯಡಿಯೂರಪ್ಪ, ಪಕ್ಷದಲ್ಲಿ ಯಾರಿಗೂ ಬೇಡವಾದ ರೀತಿಯಲ್ಲಿ ಇರಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+