ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂ ಹಗರಣ: ಸಚಿವ ಸೋಮಣ್ಣ ವಿರುದ್ಧ ತನಿಖೆ?

By Mahesh
|
Google Oneindia Kannada News

Minister V Somanna
ಬೆಂಗಳೂರು, ನ.17: ಅಕ್ರಮ ಗಣಿಗಾರಿಕೆಯಲ್ಲಿ ಹೆಸರು ಕೇಳಿಬಂದಿದ್ದರೂ ಬಿಜೆಪಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದ ವಸತಿ ಸಚಿವ ವಿ. ಸೋಮಣ್ಣ ಅವರ ಮೇಲೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಾಗಿದೆ.

1993ರಲ್ಲಿ ಬಿಡಿಎ ಸ್ವಾದೀನಪಡಿಸಿಕೊಂಡಿದ್ದ ಜಮೀನನ್ನು 2005ರಲ್ಲಿ ಸೋಮಣ್ಣ ಅವರ ಪತ್ನಿ ಶೈಲಜಾ ಹೆಸರಿನಲ್ಲಿ ನಾಗದೇವನಹಳ್ಳಿಯಲ್ಲಿ 22 ಗುಂಟೆ ಎಕರೆ ಜಮೀನು ಖರೀದಿಸಲಾಗಿತ್ತು. 2009ರಲ್ಲಿ ಯಡಿಯೂರಪ್ಪ ಅವರು ಈ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ರವಿಕೃಷ್ಣಾ ರೆಡ್ಡಿ ಎಂಬುವವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಖಾಸಗಿ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಧೀಶ ಎನ್.ಕೆ. ಸುಧೀಂದ್ರರಾವ್ ಅವರು ಶೈಲಜಾ, ವಿ. ಸೋಮಣ್ಣ ಹಾಗೂ ಯಡಿಯೂರಪ್ಪ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸುವ ಸಾಧ್ಯತೆಯಿದೆ.

ಪ್ರಕರಣದ ಮುಂದಿನ ವಿಚಾರಣೆ ನ.21ಕ್ಕೆ ಮುಂದೂಡಲಾಗಿದೆ. ಸೋಮಣ್ಣ ಅವರ ಪುತ್ರರಾದ ಅರುಣ್ ಸೋಮಣ್ಣ, ನವೀನ್ ಸೋಮಣ್ಣ ಮತ್ತಿತರರು ಪಾಲುದಾರರಾಗಿ ಮಾತಾ ಮಿನರಲ್ಸ್ ಎಂಬ ಗಣಿ ಕಂಪನಿ ತುಮಕೂರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಿದೆ.

English summary
Former CM Yeddyurappa's aide Minister V Somanna and his wife to face Lokayukta Police probe in Land Denotification case. Special court today(Nov.17) considered private complaint by Ravikrishna Reddy and ordered probe against Minister Somanna along with Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X