ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

Rahul Gandhi
ಮುಂಬೈ, ನ.17 : ಉತ್ತರ ಪ್ರದೇಶದ ಜನತೆ ಮುಂಬೈನಲ್ಲಿ ಉದ್ಯೋಗದ ಭಿಕ್ಷೆಯನ್ನು ಬೇಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಮಾಜವಾದಿ ಪಕ್ಷದ ನಗರ ಉಪಾಧ್ಯಕ್ಷ ಫಾರೂಕ್ ಘೋಸಿ ದಕ್ಷಿಣ ಮುಂಬೈನ ಬಾಂದ್ರಾದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಉತ್ತ ಪ್ರದೇಶದ ಯುವಕರು ಎಷ್ಟು ದಿನಗಳ ಕಾಲ ಮುಂಬೈನಲ್ಲಿ ಭಿಕ್ಷೆಯನ್ನು ಬೇಡುತ್ತಾರೆ ಎಂದು ರಾಹುಲ್ ಗಾಂಧಿ ಉತ್ತರ ಪ್ರದೇಶದ ಫುಲ್‌ಪುರ್ ನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಿಡಿಕಾರಿದ್ದರು.

ಭಾರತೀಯ ಸಂವಿಧಾನ ಕಾಯ್ದೆ 500 ಮತ್ತು ಅವಮಾನ ಕಾಯ್ದೆ 504ರ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲಿದೆ ಎಂದು ಘೋಸಿ ಪರ ವಕೀಲ ಮನೋಜ್ ತಿವಾರಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ವಾಸಿಸುವ ಮತ್ತು ಮುಂಬೈನಲ್ಲಿ ಉದ್ಯೋಗದಲ್ಲಿರುವ ಜನತೆ ರಾಹುಲ್ ಹೇಳಿಕೆಯ ವಿರುದ್ಧ ಭಾರಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಆದರೆ, ಉತ್ತರ ಪ್ರದೇಶದಲ್ಲಿ ಯಾವುದೇ ಅಬಿವೃದ್ಧಿ ಕಾರ್ಯಗಳನ್ನು ಮಾಡದೇ ಜನತೆಯನ್ನು ಭಿಕ್ಷುಕರನ್ನಾಗಿಸಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಕಟುವಾಗಿ ಟೀಕಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಕೂಡಾ ರಾಹುಲ್ ಗಾಂಧಿಯನ್ನು ಕಟು ಶಬ್ದಗಳಿಂದ ಟೀಕಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+