ಲೋಕಾಯುಕ್ತ ಪೀಠಕ್ಕೆ ನ್ಯಾ ಬನ್ನೂರುಮಠ ಹೆಸರೇ ಅಂತಿಮ

ಬಂಟ್ವಾಳ ತಾಲೂಕಿನ ಅಳಿಕೆಯಲ್ಲಿ ನಡೆಯಲಿರುವ ದ.ಕ. ಜಿಲ್ಲಾ 17ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲು ಆಗಮಿಸಿದ ಅವರು, ಕಲ್ಲಡ್ಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬನ್ನೂರು ಮಠರನ್ನೇ ನೇಮಕಗೊಳಿಸಲು ಸರಕಾರ ನಿರ್ಧರಿಸಿದೆ. ಈ ಬಗ್ಗೆ ಪುನರ್ ಪರಿಶೀಲನೆ ನಡೆಸುವ ಅಗತ್ಯವಿಲ್ಲ. ಅವರನ್ನೇ ನೇಮಕಗೊಳಿಸುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಲಾಗುವುದು ಎಂದು ಡಿ.ವಿ. ಸದಾನಂದ ಗೌಡ ತಿಳಿಸಿದರು.
ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪರೊಂದಿಗೆ ನ.22ರಂದು ಬಳ್ಳಾರಿಗೆ ತೆರಳಲಿದ್ದೇವೆ. ಅಲ್ಲಿ ನ. 24ರವರೆಗೆ ಒಟ್ಟು ಮೂರು ದಿನಗಳ ಕಾಲ ನಾವೆಲ್ಲರೂ ಬಿಜೆಪಿ ಅಭ್ಯರ್ಥಿ ಗಾದಿ ಲಿಂಗಪ್ಪರ ಪರ ಪ್ರಚಾರದಲ್ಲಿ ತೊಡಗಲಿದ್ದೇವೆ ಎಂದೂಬ ಸಿ ಎಂ ಸದಾನಂದ ಿದೇ ವಳೆ ಹೇಳಿದರು.












Click it and Unblock the Notifications