ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಚರ! ಡ್ರಿಂಕ್ & ಡ್ರೈವ್ ಆರು ತಿಂಗಳು ಜೈಲು

|
Google Oneindia Kannada News

ನವದೆಹಲಿ, ನ 18: ಕುಡಿದು ವಾಹನ ಚಾಲನೆ ಮಾಡುವವರ ವಿರುದ್ದ ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಮೋಟಾರ್ ವಾಹನ ಕಾಯ್ದೆ ನಿಯಮಗಳನ್ನು ಚಾಚೂತಪ್ಪದೇ ಜಾರಿಗೊಳಿಸಲು ಕೇಂದ್ರ ಸರಕಾರ ಸದ್ಯದಲ್ಲೇ ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಸಂಬಂಧ ಮಸೂದೆಯಲ್ಲಿ ತಿದ್ದುಪಡಿ ಮಾಡಿ ಮಂಡಿಸಲು ನಿರ್ಧರಿಸಿದೆ.

ಮೋಟಾರ್ ವಾಹನ ಕಾಯ್ದೆಯಲ್ಲಿನ ನಿಯಮ ಅನುಷ್ಠಾನ ಕುರಿತು ಅಧ್ಯಯನ ನಡೆಸಲು ನೇಮಿಸಿದ್ದ ತಂಡ ಸಲ್ಲಿಸಿರುವ ವರದಿಯನ್ನು ಆಧರಿಸಿ ಈ ಮಸೂದೆ ತಿದ್ದುಪಡಿಗೆ ಕೇಂದ್ರ ಸಾರಿಗೆ ಸಚಿವಾಲಯ ನಿರ್ಧರಿಸಿದೆ. ಕುಡಿದು ವಾಹನ ಚಲಾಯಿಸುವವರಿಗೆ ಆರು ತಿಂಗಳ ಜೈಲು ಶಿಕ್ಷೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಈ ತಂಡ ಮಾಡಿದೆ.

ದ್ವಿಚಕ್ರ ವಾಹನಗಳ ಸವಾರರು ಪುರುಷರೇ ಆಗಿರಲಿ ಅಥವಾ ಮಹಿಳೆಯರೇ ಆಗಿರಲಿ ಹೆಲ್ಮೆಟ್ ಧರಿಸುವುದು ಕಡ್ಡಾಯ. ಹಿಂಬದಿ ಸವಾರರಿಗೂ ಇದು ಅನ್ವಯವಾಗಲಿದೆ. ಕಾರುಗಳಲ್ಲಿ ವಾಹನ ಚಾಲಕರು ಮತ್ತು ಮುಂದಿನ ಸೀಟಿನಲ್ಲಿ ಕುಳಿತವರು ಸೀಟ್ ಬೆಲ್ಟ್ ಹಾಕಿಕೊಂಡಿರಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದಿನ ಸೀಟಿನ ಸವಾರರೂ ಸೀಟ್ ಬೆಲ್ಟ್ ಧರಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಮೋಟಾರ್ ವಾಹನ ಕಾಯ್ದೆ ಉಲ್ಲಂಘಿಸಿದವರ ಲೈಸೆನ್ಸ್ ಅನ್ನು ಮುಟ್ಟುಗೋಲು ಹಾಕಲಾಗುವುದು, ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಇದನ್ನು ಮತ್ತೆ ಪಡೆಯಲು ಸಾಧ್ಯವಾಗದಂತೆ ಮಾಡಲು ವಿತರಣಾ ವ್ಯವಸ್ಥೆಯ ಕಂಪ್ಯೂಟರ್ ಜಾಲ ಹೊಂದಲು ಉದ್ದೇಶಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡುವುದರಿಂದ ಆಗುವ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಕೇಂದ್ರ ಸಾರಿಗೆ ಸಚಿವಾಲಯ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋಟಾರು ವಾಹನ ಕಾಯ್ದೆ 1998ರ 185ನೇ ಸೆಕ್ಷನ್ ಪ್ರಕಾರ ಮದ್ಯಪಾನ ಮಾಡಿ ವಾಹನ ಓಡಿಸುವಾಗ ಸಿಕ್ಕಿಬೀಳುವವರಿಗೆ ಎರಡು ಸಾವಿರ ರೂಪಾಯಿವರೆಗೆ ದಂಡ ಅಥವಾ ಆರು ತಿಂಗಳವರೆಗೆ ಜೈಲು ಅಥವಾ ಎರಡೂ ಶಿಕ್ಷೆಗಳನ್ನು ವಿಧಿಸಲು ಅವಕಾಶವಿದೆ. ಮೂರು ವರ್ಷದ ಒಳಗಾಗಿ ಮತ್ತೆ ಇದೇ ತಪ್ಪು ಮಾಡುವವರಿಗೆ ಮೂರು ಸಾವಿರ ರೂಪಾಯಿವರೆಗೆ ದಂಡ ಮತ್ತು ಎರಡು ವರ್ಷ ಸೆರೆವಾಸಕ್ಕೆ ಕಳುಹಿಸಬಹುದು.

English summary
Union Transport Ministry decided to do the amendment in the Motor Vehicle Act and present this in the Parliment Winter session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X